2ನೇ ಟೆಸ್ಟ್: 2ನೇ ಇನ್ನಿಂಗ್ಸ್‌ನಲ್ಲಿ ಆಸೀಸ್ 6/133, ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ!

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಹೀನಾಯ ಸೋಲು ಕಂಡಿದ್ದ ಟೀಂ ಇಂಡಿಯಾ ಇದೀಗ ಎರಡನೇ ಟೆಸ್ಟ್ ಪಂದ್ಯ ಗೆಲುವಿನ ಸನಿಹದಲ್ಲಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ

ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಹೀನಾಯ ಸೋಲು ಕಂಡಿದ್ದ ಟೀಂ ಇಂಡಿಯಾ ಇದೀಗ ಎರಡನೇ ಟೆಸ್ಟ್ ಪಂದ್ಯ ಗೆಲುವಿನ ಸನಿಹದಲ್ಲಿದೆ. 

ಮೂರನೇ ದಿನದಾಟದಂತ್ಯಕ್ಕೆ ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 133 ರನ್ ಗಳಿಗೆ ಪ್ರಮುಖ 6 ವಿಕೆಟ್ ಗಳನ್ನು ಕಳೆದುಕೊಂಡಿದ್ದು 2 ರನ್ ಮುನ್ನಡೆ ಪಡೆದಿದೆ. ಇನ್ನು ಆಸ್ಟ್ರೇಲಿಯಾದ ಬೌಲರ್ ಗಳು ನಾಲ್ಕನೇ ದಿನದಾಟವನ್ನು ಆರಂಭಿಸಲಿದ್ದು ನಾಳೆ ಟೀಂ ಇಂಡಿಯಾ ವೇಗಿಗಳು ಹಿಡಿತ ಸಾಧಿಸಿ ರನ್ ಗಳಿಗೆ ಆಸ್ಟ್ರೇಲಿಯಾವನ್ನು ಆಲೌಟ್ ಮಾಡಬೇಕಿದೆ. 

ಆಸ್ಟ್ರೇಲಿಯಾ ಪರ ಕ್ಯಾಮರೂನ್ ಗ್ರಿನ್ ಅಜೇಯ 17 ಮತ್ತು ಪ್ಯಾಟ್ ಕಮ್ಮಿನ್ಸ್ ಅಜೇಯ 15 ರನ್ ಗಳಿಸಿದ್ದು ನಾಲ್ಕನೇ ದಿನದಾಟವನ್ನು ಆರಂಭಿಸಲಿದ್ದಾರೆ. ಆಸ್ಟ್ರೇಲಿಯಾ 2 ರನ್ ಮುನ್ನಡೆ ಪಡೆದಿದ್ದು ಇನ್ನು ನಾಲ್ಕು ವಿಕೆಟ್ ಮಾತ್ರ ಉಳಿದಿರುವುದರಿಂದ ನಾಳೆಯೇ ಬಹುತೇಕ ಪಂದ್ಯ ಫಲಿತಾಂಶ ಗೊತ್ತಾಗಲಿದೆ. 

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಹಂಗಾಮಿ ನಾಯಕ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸುತ್ತಿದ್ದು ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾವನ್ನು 195 ರನ್ ಗಳಿಗೆ ಆಲೌಟ್ ಮಾಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಭಾರತ 326 ರನ್ ಬಾರಿಸಿ 131 ರನ್ ಗಳ ಮುನ್ನಡೆ ಸಾಧಿಸಿತ್ತು. 

ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಆಸ್ಟ್ರೇಲಿಯಾ 133 ರನ್ ಗಳಿಗೆ ಆರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com