ಕೆಎಲ್ ರಾಹುಲ್ ನಾಯಕತ್ವ ವಹಿಸಿದ್ದ ಟೀಂ ಇಂಡಿಯಾಗೆ ಐಸಿಸಿ ದಂಡ!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಲಭ್ಯ ಹಿನ್ನೆಲೆಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಿದ್ದರು. ಆದರೆ ಇದೀಗ ಐಸಿಸಿ ಟೀಂ ಇಂಡಿಯಾ ತಂಡಕ್ಕೆ ದಂಡ ವಿಧಿಸಿದೆ.

Published: 03rd February 2020 07:40 PM  |   Last Updated: 03rd February 2020 07:40 PM   |  A+A-


Kohli-KL Rahul

ಕೊಹ್ಲಿ-ಕೆಎಲ್ ರಾಹುಲ್

Posted By : Vishwanath S
Source : PTI

ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಲಭ್ಯ ಹಿನ್ನೆಲೆಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಿದ್ದರು. ಆದರೆ ಇದೀಗ ಐಸಿಸಿ ಟೀಂ ಇಂಡಿಯಾ ತಂಡಕ್ಕೆ ದಂಡ ವಿಧಿಸಿದೆ. 

ನ್ಯೂಜಿಲ್ಯಾಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದ ಹಿನ್ನೆಲೆಯಲ್ಲಿ ಪಂದ್ಯದ ಸಂಭಾವನೆಯ ಶೇ. 20ರಷ್ಟು ಮೊತ್ತವನ್ನು ಟೀಂ ಇಂಡಿಯಾಗೆ ದಂಡವಾಗಿ ವಿಧಿಸಲಾಗಿದೆ. 

ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದ ಹಿನ್ನೆಲೆಯಲ್ಲಿ ಉಪನಾಯಕ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಿದ್ದರು. ಆದರೆ ಬ್ಯಾಟಿಂಗ್ ವೇಳೆ ರೋಹಿತ್ ಶರ್ಮಾ ಸ್ನಾಯು ಸೆಳೆತಕ್ಕೆ ಒಳಗಾಗಿ ಪಂದ್ಯದಿಂದ ಹೊರಗುಳಿದ್ದರು. ಈ ಹಿನ್ನೆಲೆಯಲ್ಲಿ ತಂಡದವನ್ನು ಕೆಎಲ್ ರಾಹುಲ್ ಮುನ್ನಡೆಸಿದ್ದರು.

ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ನಿಯಮದ ಉಲ್ಲಂಘನೆಯಾಗಿದ್ದು ನಿಗದಿತ ಸಮಯಕ್ಕೆ ಸಂಪೂರ್ಣ ಓವರ್ ಗಳನ್ನು ಎಸೆಯುವಲ್ಲಿ ಟೀಂ ಇಂಡಿಯಾ ವಿಫಲವಾಗಿದೆ.

Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp