ರಣಜಿ ಟ್ರೋಫಿ: ಕರ್ನಾಟಕಕ್ಕೆ ಇನಿಂಗ್ಸ್‌ ಹಿನ್ನಡೆ, ಪಂದ್ಯ ಡ್ರಾನಲ್ಲಿ ಅಂತ್ಯ

 ಶಿವಮೊಗ್ಗದ  ಜವಾಹರ್ ಲಾಲ್ ನೆಹರು ಎಂಜಿನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಕರ್ನಾಟಕ ಹಾಗೂ ಮಧ್ಯ ಪ್ರದೇಶ ನಡುವಿನ 2019/20ನೇ ಸಾಲಿನ ರಣಜಿ ಟ್ರೋಫಿ ಎಲೈಟ್ ಎ ಮತ್ತು ಬಿ ಗುಂಪಿನ ಪಂದ್ಯ ಡ್ರಾನಲ್ಲಿ ಮುಕ್ತಾಯವಾಯಿತು. 
ರಣಜಿ ಟ್ರೋಫಿ: ಕರ್ನಾಟಕಕ್ಕೆ ಇನಿಂಗ್ಸ್‌ ಹಿನ್ನಡೆ, ಪಂದ್ಯ ಡ್ರಾನಲ್ಲಿ ಅಂತ್ಯ

ಶಿವಮೊಗ್ಗ:  ಶಿವಮೊಗ್ಗದ  ಜವಾಹರ್ ಲಾಲ್ ನೆಹರು ಎಂಜಿನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಕರ್ನಾಟಕ ಹಾಗೂ ಮಧ್ಯ ಪ್ರದೇಶ ನಡುವಿನ 2019/20ನೇ ಸಾಲಿನ ರಣಜಿ ಟ್ರೋಫಿ ಎಲೈಟ್ ಎ ಮತ್ತು ಬಿ ಗುಂಪಿನ ಪಂದ್ಯ ಡ್ರಾನಲ್ಲಿ ಮುಕ್ತಾಯವಾಯಿತು.

ಇಂದು ಬೆಳಗ್ಗೆೆ ನಾಲ್ಕು ವಿಕೆಟ್ ಕಳೆದುಕೊಂಡು 311 ರನ್ ಗಳಿಂದ ಪ್ರಥಮ ಇನಿಂಗ್ಸ್‌ ಮುಂದುವರಿಸಿದ ಮಧ್ಯ ಪ್ರದೇಶ ತಂಡ 156.4 ಓವರ್‌ಗಳಿಗೆ 431 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಪ್ರಥಮ ಇನಿಂಗ್ಸ್‌‌ನಲ್ಲಿ ಪ್ರವಾಸಿ ತಂಡ 5 ರನ್ ಮುನ್ನಡೆ ಪಡೆಯಿತು. ನಂತರ, ದ್ವಿತೀಯ ಇನಿಂಗ್ಸ್‌ ಆರಂಭಿಸಿದ ಕರ್ನಾಟಕ ತಂಡ 15 ಓವರ್‌ಗಳಿಗೆ ಒಂದು ವಿಕೆಟ್ ನಷ್ಟಕ್ಕೆೆ 62 ರನ್ ಗಳಿಸಿತು.

ಪ್ರಥಮ ಇನಿಂಗ್ಸ್‌‌ನಲ್ಲಿ ಶತಕ ಬಾರಿಸಿದ್ದ ಆರ್.ಸಮರ್ಥ್ ಈ ಇನಿಂಗ್ಸ್‌‌ನಲ್ಲಿ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅತ್ಯುತ್ತಮ ಬ್ಯಾಟಿಂಗ್ ಮಾಡಿದ ದೇವದತ್ತ ಪಡಿಕ್ಕಲ್ 44 ಎಸೆತಗಳಲ್ಲಿ 31 ರನ್ ಹಾಗೂ ರೋಹನ್ ಕದಮ್ 16 ರನ್ ಗಳಿಸಿ ಅಜೇಯರಾಗಿ ಉಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com