ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್: ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ

ದಕ್ಷಿಣ ಆಫ್ರಿಕಾದ ಪೊಚೆಫ್ ಸ್ಟ್ರೂಮ್‌ನಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ
ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ

ಕೇಪ್ ಟೌನ್: ದಕ್ಷಿಣ ಆಫ್ರಿಕಾದ ಪೊಚೆಫ್ ಸ್ಟ್ರೂಮ್‌ನಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಈಗಾಗಲೇ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿರುವ ಭಾರತ ತಂಡ ಐದನೇ ಬಾರಿಗೆ ಪ್ರಶಸ್ತಿ ಗೆಲ್ಲುವ ತವಕದಲ್ಲಿದ್ದು, ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶ ಮಾಡಿರುವ ಬಾಂಗ್ಲಾದೇಶ ಚೊಚ್ಚಲ ಅಂಡರ್ 19 ವಿಶ್ವಕಪ್ ಪ್ರಶಸ್ತಿಗೆ ಮುತ್ತಿಡಲು ತುದಿಗಾಲಲ್ಲಿ ನಿಂತಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ಡ್ರಾವಿಡ್ ತರಬೇತಿ ನೀಡುತ್ತಿರುವ ಕಿರಿಯ ತಂಡ ವಿಶ್ವ ಕಪ್ ನಲ್ಲಿ ಐದನೇ ಪ್ರಶಸ್ತಿ ಗೆಲ್ಲುವ ತವಕದಲ್ಲಿದೆ. 

ಏಷ್ಯಾ ಖಂಡದ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದು ವಿಶೇಷ. 2018ರಲ್ಲಿ ಪೃಥ್ವಿ ಶಾ, ಶುಭಮನ್ ಗಿಲ್ ಅವರಿದ್ದ ತಂಡವು ಪ್ರಶಸ್ತಿ ಗೆದ್ದಿತ್ತು. ಅವರಿಬ್ಬರೂ ಸದ್ಯ ಭಾರತ ರಾಷ್ಟ್ರೀಯ ತಂಡದಲ್ಲಿದ್ದಾರೆ. ಈ ಬಾರಿ ಫೈನಲ್ ಗೆ ತಂಡವು ಲಗ್ಗೆ ಹಾಕಲು ಮುಂಬೈ ಹುಡುಗ ಯಶಸ್ವಿ ಜೈಸ್ವಾಲ್, ಸ್ಪಿನ್ನರ್ ರವಿ ಬಿಷ್ಣೋಯಿ ಮತ್ತು ಮಧ್ಯಮವೇಗಿ ಕಾರ್ತಿಕ್ ತ್ಯಾಗಿ ಕಾರಣರಾಗಿದ್ದಾರೆ. ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ತಂಡದ ಎದುರು ಯಶಸ್ವಿ ಶತಕ ಬಾರಿಸಿದ್ದರು. ತಂಡವು 10 ವಿಕೆಟ್‌ಗಳಿಂದ ಜಯಿಸಿತ್ತು.  2000ನೇ ಇಸವಿಯಲ್ಲಿ ಭಾರತವು ಮೊದಲ ಬಾರಿಗೆ ಪ್ರಶಸ್ತಿ ಗೆದ್ದಿತ್ತು. ಅಲ್ಲಿಂದ ಇಲ್ಲಿಯವರೆಗೆ ಒಟ್ಟು ನಾಲ್ಕು ಸಲ ಚಾಂಪಿಯನ್ ಆಗಿತ್ತು. ಎರಡು ಬಾರಿ ರನ್ನರ್ಸ್ ಅಪ್ ಆಗಿದೆ. ಫೈನಲ್‌ಗೆರಿರುವುದು ಇದು ಏಳನೇ ಸಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com