31 ವರ್ಷಗಳ ನಂತರ ವೈಟ್ ವಾಶ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಮುಖಭಂಗ

ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಸೋಲುವ ಮೂಲಕ ಭಾರತ ತಂಡ ಬರೊಬ್ಬರಿ 31 ವರ್ಷಗಳ ಬಳಿಕ ಏಕದಿನ ಸರಣಿಯಲ್ಲಿ ವೈಟ್ ವಾಶ್ ಮುಖಭಂಗಕ್ಕೀಡಾಗಿದೆ.

Published: 11th February 2020 03:34 PM  |   Last Updated: 11th February 2020 04:23 PM   |  A+A-


Kiwis whitewash India 3-0 in ODIs after about 31 years

ಟೀಂ ಇಂಡಿಯಾ

Posted By : Srinivasamurthy VN
Source : Online Desk

ಮೌಂಟ್‌ಮೌಂಗಾನುಯಿ: ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಸೋಲುವ ಮೂಲಕ ಭಾರತ ತಂಡ ಬರೊಬ್ಬರಿ 31 ವರ್ಷಗಳ ಬಳಿಕ ಏಕದಿನ ಸರಣಿಯಲ್ಲಿ ವೈಟ್ ವಾಶ್ ಮುಖಭಂಗಕ್ಕೀಡಾಗಿದೆ.

ಇಂದು ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಐದು ವಿಕೆಟ್ ಗಳ ಸೋಲು ಕಂಡಿದ್ದು. ಆ ಮೂಲಕ 3 ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕೈ ಚೆಲ್ಲಿದೆ. ಇದು ಪ್ರವಾಸಿ ಭಾರತ ಕಳೆದ 31 ವರ್ಷಗಳಲ್ಲಿ ಎದುರಿಸಿದ ಮೊದಲ ವೈಟ್ ವಾಶ್ ಆಗಿದೆ.

ಈ ಹಿಂದೆ 1983-84ರಲ್ಲಿ ಭಾರತದಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡ 5-0 ಅಂತರದಲ್ಲಿ ವೈಟ್ ವಾಶ್ ಆಗಿತ್ತು. ಇದು ಭಾರತ ಕಂಡ ಮೊಟ್ಟ ಮೊದಲ ವೈಟ್ ವಾಶ್ ಆಗಿದೆ. ಆ ಬಳಿಕ 1988-89ರಲ್ಲಿ ವೆಸ್ಟ್ ಇಂಡೀಸ್ ನಲ್ಲಿ ಮತ್ತೆ 5-0 ಅಂತರದಲ್ಲಿ ವೈಟ್ ವಾಶ್ ಆಗಿತ್ತು. ಆ ಬಳಿಕ 2006-07ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಐದು ಪಂದ್ಯಗಳ ಏಕದಿನ ಸರಣಿಯನ್ನು 4-0 ಅಂತರದಲ್ಲಿ ಸೋತಿತ್ತು. ಒಂದು ಪಂದ್ಯ ರದ್ದಾಗಿತ್ತು. 

ಇದೀಗ 31 ವರ್ಷಗಳ ಬಳಿಕ ಮೊದಲ ಬಾರಿಗೆ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ವೈಟ್ ವಾಶ್ ಮುಖಭಂಗಕ್ಕೀಡಾಗಿದೆ.

Stay up to date on all the latest ಕ್ರಿಕೆಟ್ news
Poll
Babri Masjid

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯ ಒದಗಿಸಲಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp