3ನೇ ಏಕದಿನ: ಮೈದಾನದಲ್ಲಿ ಕನ್ನಡ ಬಳಸಿದ ಕೆಎಲ್ ರಾಹುಲ್, ಮನೀಶ್ ಪಾಂಡ್!

ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಆಟಗಾರರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೇ ಮೈದಾನದಲ್ಲಿ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನ ಗೆದ್ದಿದ್ದಾರೆ.

Published: 11th February 2020 12:57 PM  |   Last Updated: 11th February 2020 12:57 PM   |  A+A-


Manish Pandey and KL Rahul

ಮನೀಶ್ ಪಾಂಡೇ ಮತ್ತು ಕೆಎಲ್ ರಾಹುಲ್

Posted By : Srinivasamurthy VN
Source : Online Desk

ಮೌಂಟ್‌ಮೌಂಗಾನುಯಿ: ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಆಟಗಾರರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೇ ಮೈದಾನದಲ್ಲಿ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನ ಗೆದ್ದಿದ್ದಾರೆ.

ಹೌದು.. ಮೌಂಟ್‌ಮೌಂಗಾನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಕರ್ನಾಟಕ ಮೂಲದ ಆಟಗಾರರಾದ ಮನೀಶ್ ಪಾಂಡೇ ಹಾಗೂ ಶತಕ ವೀರ ಕೆಎಲ್ ರಾಹುಲ್ ಕನ್ನಡದಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಶ್ರೇಯಶ್ ಅಯ್ಯರ್ ಔಟಾದ ಬಳಿಕ 5ನೇ ವಿಕೆಟ್ ಗೆ ಜೊತೆಯಾದ ಈ ಜೋಡಿ ಭಾರತಕ್ಕೆ ಶತಕದ ಜೊತೆಯಾಟ ನೀಡಿತು. ಈ ವೇಳೆ ಉಭಯ ಆಟಗಾರರು ಕನ್ನಡದಲ್ಲೇ ಮಾತನಾಡಿಕೊಂಡ ವಿಚಾರ ಸ್ಟಂಪ್ ಮೈಕ್ ನಲ್ಲಿ ದಾಖಲಾಗಿದೆ.

ಮನೀಶ್ ಪಾಂಡೆ ಚೆಂಡನ್ನು ತಳ್ಳಿ ಒಂಟಿ ರನ್‌ಗೆ ಓಡಲು ಮುಂದಾಗುತ್ತಾರೆ. ಈ ವೇಳೆ ನಾನ್ ಸ್ಟ್ರೈಕ್‌ನಲ್ಲಿದ್ದ ಕೆ.ಎಲ್ ರಾಹುಲ್‌ ಮನೀಶ್ ಪಾಂಡೆಗೆ 'ಬೇಡ ಬೇಡ' ಎಂದು ಜೋರಾಗಿ ಕೂಗಿ ಹೇಳುತ್ತಾರೆ. ಇದು ಸ್ಟಂಪ್ ಮೈಕ್‌ನಲ್ಲಿ ದಾಖಲಾಗಿದೆ. ಅಲ್ಲದೆ ಪ್ರತೀ ಓವರ್ ನ ಮುಕ್ತಾಯದ ಬಳಿಕವೂ ಉಭಯ ಆಟಗಾರರು ಕನ್ನಡದಲ್ಲೇ ಸಂಭಾಷಣೆ ನಡೆಸಿದ್ದಾರೆ. 

ಈ ಹಿಂದೆಯೇ ಕೂಡ ಮನೀಶ್ ಪಾಂಡೆ ಮೈದಾನದಲ್ಲಿ ಕನ್ನಡದಲ್ಲಿ ಮಾತನಾಡಿ ಸುದ್ದಿಯಾಗಿದ್ದರು. ಐಪಿಎಲ್ ಪಂದ್ಯಾವಳಿಯಲ್ಲಿ ಮನೀಶ್ ಪಾಂಡೇ ರಾಬಿನ್ ಉತ್ತಪ್ಪರೊಂದಿಗೆ ಪರಸ್ಪರ ಮಾತುಕತೆ ನಡೆಸಿದ್ದರು. ಈ ವೇಳೆ ವೀಕ್ಷಕ ವಿವರಣೆದಾರರೂ ಕೂಡ ಅದು ಕನ್ನಡ ಭಾಷೆಯಲ್ಲವೇ ಎಂದು ಪ್ರಶ್ನಿಸಿದ್ದಾಗ ಪಾಂಡೇ ಹೌದು ಅದು ಕನ್ನಡ ಎಂದು ಉತ್ತರಿಸಿದ್ದರು.

Stay up to date on all the latest ಕ್ರಿಕೆಟ್ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp