ಐಸಿಸಿ ಮಹಿಳಾ ಟಿ-20 ಶ್ರೇಯಾಂಕ: ಸ್ಮೃತಿ ಮಂಧಾನ ನಾಲ್ಕನೇ ಸ್ಥಾನಕ್ಕೆ ಏರಿಕೆ

ಐಸಿಸಿ ಮಹಿಳಾ  ಟಿ-20 ಅಂತಾರಾಷ್ಟ್ರೀಯ ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ಪ್ರಕಟವಾಗಿದ್ದು, ಭಾರತದ ಸ್ಟಾರ್ ಆಟಗಾರ್ತಿ  ಸ್ಮೃತಿ ಮಂಧಾನ ಮೂರು ಸ್ಥಾನಗಳ ಜಿಗಿತದೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆದರೆ, ಜೆಮಿಮಾ ರೊಡ್ರಿಗಸ್  ಏಳನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. 
ಸ್ಮೃತಿ ಮಂಧಾನ
ಸ್ಮೃತಿ ಮಂಧಾನ

ದುಬೈ: ಐಸಿಸಿ ಮಹಿಳಾ  ಟಿ-20 ಅಂತಾರಾಷ್ಟ್ರೀಯ ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ಪ್ರಕಟವಾಗಿದ್ದು, ಭಾರತದ ಸ್ಟಾರ್ ಆಟಗಾರ್ತಿ  ಸ್ಮೃತಿ ಮಂಧಾನ ಮೂರು ಸ್ಥಾನಗಳ ಜಿಗಿತದೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆದರೆ, ಜೆಮಿಮಾ ರೊಡ್ರಿಗಸ್  ಏಳನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಹರ್ಮನ್ ಪ್ರೀತ್ ಕೌರ್  9 ನೇ ಸ್ಥಾನದಲ್ಲಿಯೇ ಉಳಿದಿದ್ದಾರೆ.

ಬೌಲರ್ ಗಳ ಪಟ್ಟಿಯಲ್ಲಿ ಪೂನಂ ಯಾದವ್ ಟಾಪ್ 10ರಿಂದ ಹೊರಗುಳಿದಿದ್ದು, 12ನೇ ಸ್ಥಾನದಲ್ಲಿದ್ದಾರೆ. ನಂಬರ್ 3ರಲ್ಲಿರುವ ನ್ಯೂಜಿಲೆಂಡ್ ನ ಸೂಜೈ ಬ್ಯಾಟ್ಸ್  ಅದೇ ಸ್ಥಾನದಲ್ಲಿ ಉಳಿದಿದ್ದಾರೆ. ಕ್ಯಾಪ್ಟನ್ ಸೋಫಿ ಡಿವೈನ್ ನಂಬರ್ 2 ಸ್ಥಾನದಲ್ಲಿದ್ದಾರೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಮೂರು ರಾಷ್ಟ್ರಗಳ ಸರಣಿಯಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ್ತಿ ಬೆಥ್ ಮೂನಿ ಹಾಗೂ ಮಂಧಾನ ಎರಡು ಅರ್ಧ ಶತಕಗಳನ್ನು ಬಾರಿಸಿದ್ದರು. ಈ  ಮಧ್ಯೆ ಮೆಗ್ ಲ್ಯಾನಿಂಗ್ ಮೊದಲ ಮೂರು ಸ್ಥಾನಗಳಿಂದ ಕೈಬಿಟ್ಟಿದ್ದರೂ  ಮೊದಲ ಐದರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com