ಭಾರತ-ಪಾಕಿಸ್ತಾನ ನಡುವಿನ ಅಭ್ಯಾಸ ಪಂದ್ಯ ಮಳೆಗೆ ಬಲಿ

ಮುಂಬರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಿಮಿತ್ತ ಭಾರತ ಹಾಗೂ ಪಾಕಿಸ್ತಾನ ನಡುವೆ ಇಂದು ನಡೆಯಬೇಕಿದ್ದ ಅಭ್ಯಾಸ ಪಂದ್ಯ ಮಳೆಯಿಂದ ರದ್ದಾಯಿತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬ್ರಿಸ್ಬೇನ್: ಮುಂಬರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಿಮಿತ್ತ ಭಾರತ ಹಾಗೂ ಪಾಕಿಸ್ತಾನ ನಡುವೆ ಇಂದು ನಡೆಯಬೇಕಿದ್ದ ಅಭ್ಯಾಸ ಪಂದ್ಯ ಮಳೆಯಿಂದ ರದ್ದಾಯಿತು.

ಇಲ್ಲಿನ ಅಲಾನ್ ಬಾರ್ಡರ್ ಕ್ರೀಡಾಂಗಣದಲ್ಲಿ ಇಂದು ನಡೆಯಬೇಕಿದ್ದ ಸಾಂಪ್ರದಾಯಿಕ ಎದುರಾಳಿಗಳ ಕಾದಾಟಕ್ಕೆ ಅಂತಿಮ 11 ಆಟಗಾರ್ತಿಯ ಪಟ್ಟಿ ಸಿದ್ದವಾಗಿತ್ತು. ಇನ್ನೇನು ಪಂದ್ಯ ಆರಂಭವಾಗಬೇಕಿತ್ತು. ಅಷ್ಟರೊಳಗೆ ಮಳೆ ಆವರಿಸಿತು. ಆ ಮೂಲಕ ಪಂದ್ಯ ಮಳೆಗೆ ಬಲಿಯಾಯಿತು.

ಇದಕ್ಕೂ ಮುನ್ನ ಭಾರತ ವನಿತೆಯರು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ವಿರುದ್ಧ ಟಿ-20 ತ್ರಿಕೋನ ಸರಣಿ ಆಡಿತ್ತು. ಈ ಸರಣಿಯಲ್ಲಿ ಭಾರತ ಫೈನಲ್ ಹಣಾಹಣಿಯಲ್ಲಿ ಆಸೀಸ್ ವಿರುದ್ಧ ಸೋಲು ಅನುಭವಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com