ಮೊದಲ ಟೆಸ್ಟ್: ಎರಡನೇ ದಿನದಾಟಕ್ಕೆ ನ್ಯೂಜಿಲ್ಯಾಂಡ್ 5 ವಿಕೆಟ್‍ಗೆ 216 ರನ್!

ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 165 ರನ್ ಗಳಿಗೆ ಸರ್ವಪತನ ಕಂಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲ್ಯಾಂಡ್ ಎರಡನೇ ದಿನದಾಟಕ್ಕೆ 5 ವಿಕೆಟ್ ನಷ್ಟಕ್ಕೆ 216 ರನ್ ಪೇರಿಸಿದೆ.

Published: 22nd February 2020 12:30 PM  |   Last Updated: 22nd February 2020 04:56 PM   |  A+A-


for representation purpose only

ಸಂಗ್ರಹ ಚಿತ್ರ

Posted By : Vishwanath S
Source : Online Desk

ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 165 ರನ್ ಗಳಿಗೆ ಸರ್ವಪತನ ಕಂಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲ್ಯಾಂಡ್ ಎರಡನೇ ದಿನದಾಟಕ್ಕೆ 5 ವಿಕೆಟ್ ನಷ್ಟಕ್ಕೆ 216 ರನ್ ಪೇರಿಸಿದೆ. 

ವೆಲ್ಲಿಂಗ್ಟನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಕಳಪೆ ಪ್ರದರ್ಶನ ನೀಡಿತ್ತು. ಮೊದಲ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು ಕೇವಲ 122 ರನ್ ಗಳಿಸಿತ್ತು. ಎರಡನೇ ದಿನದಾಟ ಆರಂಭಿಸಿದ್ದ ಟೀಂ ಇಂಡಿಯಾ 43 ರನ್ ಪೇರಿಸಿ 5 ಕಳೆದುಕೊಂಡು 165 ರನ್ ಗಳಿಗೆ ಸರ್ವಪತನ ಕಂಡಿತ್ತು.

ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲ್ಯಾಂಡ್ 5 ವಿಕೆಟ್ ನಷ್ಟಕ್ಕೆ 216 ರನ್ ಪೇರಿಸಿತ್ತು. ಈ ವೇಳೆ ಮಂದ ಬೆಳಕಿನ ಹಿನ್ನೆಲೆಯಲ್ಲಿ ಪಂದ್ಯವನ್ನು ಸ್ಧಗಿತಗೊಳಿಸಲಾಯಿತು. ಸದ್ಯ ಕಿವೀಸ್ 51 ರನ್ ಮುನ್ನಡೆ ಸಾಧಿಸಿದೆ.

ನ್ಯೂಜಿಲ್ಯಾಂಡ್ ಪರ ಲ್ಯಾಥಮ್ 11, ಬ್ಲಂಡೇಲ್ 30, ಕೇನ್ ವಿಲಿಯಮ್ಸನ್ 89, ಟೇಲರ್ 44, ನಿಕೋಲಸ್ 17 ರನ್ ಪೇರಿಸಿದ್ದಾರೆ. 

Stay up to date on all the latest ಕ್ರಿಕೆಟ್ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp