ವೆಲ್ಲಿಂಗ್ಟನ್ ಟೆಸ್ಟ್: ಅಗರ್ವಾಲ್ ಅರ್ಧಶತಕದ ಹೊರತಾಗಿಯೂ ಸಂಕಷ್ಟದಲ್ಲಿ ಟೀಂ ಇಂಡಿಯಾ

ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್( 58 ರನ್) ಅವರ ಅರ್ಧಶತಕದ ಹೊರತಾಗಿಯೂ ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯದ ಮೂರನೇ ದಿನವೂ ನ್ಯೂಜಿಲೆಂಡ್ ವಿರುದ್ಧ ಹಿನ್ನಡೆ ಅನುಭವಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವೆಲ್ಲಿಂಗ್ಟನ್: ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್( 58 ರನ್) ಅವರ ಅರ್ಧಶತಕದ ಹೊರತಾಗಿಯೂ ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯದ ಮೂರನೇ ದಿನವೂ ನ್ಯೂಜಿಲೆಂಡ್ ವಿರುದ್ಧ ಹಿನ್ನಡೆ ಅನುಭವಿಸಿದೆ.

ಇಲ್ಲಿನ, ಬೇಸಿನ್ ರಿವರ್ ಅಂಗಳದಲ್ಲಿ 183 ರನ್ ಬೃಹತ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ತಂಡದ ಆರಂಭ ಉತ್ತಮವಾಗಿರಲಿಲ್ಲ. ಮೊದಲ ಇನಿಂಗ್ಸ್‌ನಂತೆ ಎರಡನೇ ಇನಿಂಗ್ಸ್‌ನಲ್ಲಿಯೂ ಯುವ ಬ್ಯಾಟ್ಸ್‌ಮನ್ ಪೃಥ್ವಿಶಾ(14 ರನ್) ಅವರು ಬೇಗ ನಿರ್ಗಮಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 165 ರನ್ ಗಳಿಗೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲ್ಯಾಂಡ್ 348 ರನ್ ಪೇರಿಸಿ ಆಲೌಟ್ ಆಯಿತು. 183 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಮೂರನೇ ದಿನದಾಟಕ್ಕೆ 4 ವಿಕೆಟ್ ನಷ್ಟಕ್ಕೆ 144 ರನ್ ಪೇರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com