ಬಾಂಗ್ಲಾ ವಿರುದ್ಧ ಅಂಡರ್ 19 ಭಾರತ ಸೋಲಿಗೆ ಸೇಡು ತೀರಿಸಿಕೊಂಡ ಮಹಿಳಾ ಪಡೆ!

ಅಂಡರ್ 19 ವಿಶ್ವಕಪ್ ಟೂರ್ನಿಯ ಬಾಂಗ್ಲಾ ವಿರುದ್ಧ ಭಾರತ ತಂಡ ಸೋತಿತ್ತು. ಇದೀಗ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯವೊಂದರಲ್ಲಿ ಬಾಂಗ್ಲಾ ತಂಡವನ್ನು ಸೋಲಿಸಿ ಸೇಡು ತೀರಿಸಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅಂಡರ್ 19 ವಿಶ್ವಕಪ್ ಟೂರ್ನಿಯ ಬಾಂಗ್ಲಾ ವಿರುದ್ಧ ಭಾರತ ತಂಡ ಸೋತಿತ್ತು. ಇದೀಗ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯವೊಂದರಲ್ಲಿ ಬಾಂಗ್ಲಾ ತಂಡವನ್ನು ಸೋಲಿಸಿ ಸೇಡು ತೀರಿಸಿಕೊಂಡಿದೆ.

ಪರ್ತ್ ನಲ್ಲಿ ನಡೆದ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಭಾರತ ಮಹಿಳಾ ತಂಡಡ 18 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ. ಮೊದಲ ಪಂದ್ಯದಲ್ಲಿ 4 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಪೂನಂ ಯಾದವ್ ಈ ಪಂದ್ಯದಲ್ಲೂ 3 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು.

ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 142 ರನ್ ಪೇರಿಸಿತ್ತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 124 ರನ್ ಪೇರಿಸಿ 18 ರನ್ ಗಳಿಂದ ಸೋಲು ಕಂಡಿದೆ.

ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದ ಭಾರತ ಇದೀಗ ಎರಡನೇ ಪಂದ್ಯದಲ್ಲೂ ಗೆಲುವು ಸಾಧಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com