ಐಪಿಎಲ್ 2020: ಸನ್ ರೈಸರ್ಸ್ ಹೈದ್ರಾಬಾದ್ ತಂಡಕ್ಕೆ ಡೇವಿಡ್ ವಾರ್ನರ್ ನಾಯಕ

ಐಪಿಎಲ್ 2020 ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್  ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ.

Published: 27th February 2020 12:10 PM  |   Last Updated: 27th February 2020 12:18 PM   |  A+A-


David_Warner1

ಡೇವಿಡ್ ವಾರ್ನರ್

Posted By : nagaraja
Source : ANI

ನವದೆಹಲಿ: ಐಪಿಎಲ್ 2020 ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್  ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ.

ಈ ವಿಚಾರವನ್ನು ಸನ್ ರೈಸರ್ಸ್ ಹೈದ್ರಾಬಾದ್ ಪ್ರಾಂಚೈಸಿ ಇಂದು ಟ್ವೀಟರ್ ಮೂಲಕ ಸ್ಪಷ್ಪಪಡಿಸಿದೆ. ಡೇವಿಡ್ ವಾರ್ನರ್ ಅವರ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ. 

ಈ ಬಾರಿಯ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡದ ನಾಯಕರಾಗುತ್ತಿರುವುದಕ್ಕೆ ಸಂತಸವಾಗುತ್ತಿದೆ. ಈ ಅವಕಾಶ ಒದಗಿಸಿದ್ದಕ್ಕೆ ಅಬಾರಿಯಾಗಿದ್ದೇನೆ. ಕಳೆದ ವರ್ಷ ನಾಯಕತ್ವ ವಹಿಸಿದ್ದ ಭುವನೇಶ್ವರ್ ಕುಮಾರ್ ಹಾಗೂ ಕೇನ್ ವಿಲಿಯಮ್ಸ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿ ಟ್ರೋಫಿ ಗೆಲ್ಲಲು ಎಲ್ಲ ರೀತಿಯ ಪ್ರಯತ್ನ ಪಡುವುದಾಗಿ ಡೇವಿಡ್ ವಾರ್ನರ್ ಹೇಳಿದ್ದಾರೆ.

ಕಳೆದ ವರ್ಷ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸ್  ಸನ್ ರೈಸರ್ಸ್ ಹೈದ್ರಾಬಾದ್ ತಂಡದ ನಾಯಕರಾಗಿದ್ದರು. ಕೆಲವು ಪಂದ್ಯಗಳಿಗೆ ಭುವನೇಶ್ವರ್ ಕುಮಾರ್ ಕೂಡಾ ನಾಯಕತ್ವ ವಹಿಸಿಕೊಂಡಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ 1 ವರ್ಷ ನಿಷೇಧ ಶಿಕ್ಷೆ ಬಳಿಕ ಕಮ್ ಬ್ಯಾಕ್ ಆಗಿರುವ ಡೇವಿಡ್ ವಾರ್ನರ್ ಅದ್ಬುತ ಪ್ರದರ್ಶನ ನೀಡುತ್ತಿದ್ದಾರೆ. 
 

Stay up to date on all the latest ಕ್ರಿಕೆಟ್ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp