ಮಹಿಳಾ ಟಿ20 ವಿಶ್ವಕಪ್: ನ್ಯೂಜಿಲೆಂಡ್ ಮಣಿಸಿದ ಭಾರತ ಸೆಮಿಫೈನಲ್ ಗೆ ಲಗ್ಗೆ

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ವನಿತೆಯರ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಇಂದು ನಡೆದ ನ್ಯೂಜಿಲೆಂಡ್ ವಿರುದ್ದ ಪಂದ್ಯದಲ್ಲೂ ಗೆದ್ದ ಭಾರತ ತಂಡ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.
ನ್ಯೂಜಿಲೆಂಡ್ ಮಣಿಸಿದ ಭಾರತ ಸೆಮೀಸ್ ಗೆ ಲಗ್ಗೆ
ನ್ಯೂಜಿಲೆಂಡ್ ಮಣಿಸಿದ ಭಾರತ ಸೆಮೀಸ್ ಗೆ ಲಗ್ಗೆ

ಮೆಲ್ಬೋರ್ನ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ವನಿತೆಯರ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಇಂದು ನಡೆದ ನ್ಯೂಜಿಲೆಂಡ್ ವಿರುದ್ದ ಪಂದ್ಯದಲ್ಲೂ ಗೆದ್ದ ಭಾರತ ತಂಡ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.

ಮೆಲ್ಬೋರ್ನ್ ನ ಜಂಕ್ಷನ್ ಓವಲ್ ಕ್ರೀಡಾಂಗಣದಲ್ಲಿ ಇಂದು ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತದ ವನಿತೆಯರ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತು. ಪ್ರಸ್ತುತ ಟೂರ್ನಿಯಲ್ಲಿ ಅದ್ಭುತ ಲಯದಲ್ಲಿರುವ ಶಫಾಲಿ ವರ್ಮಾ ಅವರು ನಿರೀಕ್ಷೆಯಂತೆ ಅದ್ಭುತ ಬ್ಯಾಟಿಂಗ್ ಮಾಡಿದರು. ಆರಂಭದಿಂದಲೇ ಅಬ್ಬರಿಸಿದ ವರ್ಮಾ ನ್ಯೂಜಿಲೆಂಡ್ ಮೇಲೆ ಒತ್ತಡ ಹೇರಿದ್ದರು. ಎರಡು ಜೀವದಾನ ಪಡೆದ ಶಫಾಲಿ, ಸ್ಫೋಟಕ ಬ್ಯಾಟಿಂಗ್ ಗೆ ಮೊರೆ ಹೋದರು. ಕೇವಲ 34 ಎಸೆತಗಳಿಗೆ ಮೂರು ಸಿಕ್ಸರ್ ಹಾಗೂ ನಾಲ್ಕು ಬೌಂಡರಿಯೊಂದಿಗೆ 46 ರನ್ ಚಚ್ಚಿದರು, ಅರ್ಧಶತಕದಂಚಿನಲ್ಲಿ ಅಮೇಲಿಯಾ ಕೆರ್ ಗೆ ವಿಕೆಟ್ ಒಪ್ಪಿಸಿದರು.

ಭಾರತದ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ 46 ರನ್ (34 ಎಸೆತ), ತಾನಿಯಾ ಭಾಟಿಯಾ 23 ರನ್(25 ಎಸೆತ) ನ್ಯೂಜಿಲೆಂಡ್ ನ ಮಾರಕ ಬೌಲಿಂಗ್ ದಾಳಿಗೆ ಪ್ರತಿರೋಧ ಒಡ್ಡಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತು. 

ನ್ಯೂಜಿಲೆಂಡ್ ಪರ ಅಮೇಲಿಯಾ ಕೆರ್ರ್ 2, ರೋಸ್ ಮೇರ್ 2 ವಿಕೆಟ್ ಪಡೆದರೆ, ಲೀ ತಹುಹು, ಸೋಫಿ ಡಿವೈನ್, ಲೇ ಕಾಸ್ಪೆರೆಕ್ ತಲಾ ಒಂದೊಂದು ವಿಕೆಟ್ ಪಡೆದರು. 

ಭಾರತ ನೀಡಿದ್ದ 134 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿದ ಸೋಫಿ ಡಿವೈನ್ ಪಡೆ ಭಾರತದ ಕರಾರುವಕ್ಕಾದ ಬೌಲಿಂಗ್ ತತ್ತರಿಸಿ ರನ್ ಗಳಿಸುವಲ್ಲಿ ಪರದಾಡಿತು. ನಿಗದಿತ 20 ಓವರ್ ಗಳಲ್ಲಿ ಕಿವೀಸ್ ಪಡೆ 6 ವಿಕೆಟ್ ಕಳೆದುಕೊಂಡು 129 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಅಂತಿಮವಾಗಿ ಕೇವಲ 4 ರನ್ ಗಳ ಅಂತರದಲ್ಲಿ ಭಾರತದ ವನಿಯತೆರ ತಂಡ ಗೆಲುವಿನ ನಗೆ ಬೇರಿ, ಟೂರ್ನಿಯ ಸೆಮಿ ಫೈನಲ್ ಹಂತಕ್ಕೆ ಲಗ್ಗೆ ಇಟ್ಟಿತು. ಭಾರತದ ಪರ 46 ರನ್ ಗಳಿಸಿದ ಶಫಾಲಿ ವರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಅಲ್ಲದೆ ಹಾಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಲಗ್ಗೆ ಇಟ್ಟ ಮೊದಲ ತಂಡ ಎಂಬ ಕೀರ್ತಿಗೂ ಭಾರತ ಭಾಜನವಾಯಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com