ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ವರ್ಷದ ಮೊದಲ ಟಿ20ಗೆ ಮಳೆ ಕಾಟ

ಪ್ರಸಕ್ತ ವರ್ಷದ ಮೊದಲ ಸರಣಿಯಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ, ಪ್ರವಾಸಿ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿದೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಗುವಾಹಟಿ: ಪ್ರಸಕ್ತ ವರ್ಷದ ಮೊದಲ ಸರಣಿಯಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ, ಪ್ರವಾಸಿ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿದೆ.

ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ ನೀಡಿದೆ. ಎಷ್ಟು ಗಂಟೆಗೆ ಪಂದ್ಯ ಆರಂಭವಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಗಾಯದಿಂದ ಚೇತರಿಸಿಕೊಂಡ ಬಳಿಕ ಜಸ್ಪ್ರಿತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ. 

ಕಳೆದ ವರ್ಷ ವಿಶ್ವಕಪ್‌ ವೈಫಲ್ಯ ಹೊರತಾಗಿ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲೂ ಕೊಹ್ಲಿ ಸಾರಥ್ಯದ ಭಾರತ ತಂಡ ಅಧಿಕಾರಯುತ ಪ್ರದರ್ಶನ ನೀಡಿದೆ. ಈ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್‌ ನಡೆಯುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಟಿ20 ಸರಣಿಗಳನ್ನಾಡಲು ಎದುರು ನೋಡುತ್ತಿದೆ.

 ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿ ಬಳಿಕ ಭಾರತ ಆಸ್ಟ್ರೇಲಿಯಾ ಎದುರು ಅಷ್ಟೇ ಪಂದ್ಯಗಳ ಒಡಿಐ ಸರಣಿಯನ್ನಾಡಲಿದ್ದು, ನಂತರ ಕಿವೀಸ್‌ ಪ್ರವಾಸ ಕೈಗೊಂಡ 5 ಪಂದ್ಯಗಳ ಟಿ20 ಸರಣಿಯಲ್ಲಿ ಪೈಪೋಟಿ ನಡೆಸಲಿದೆ. ಇದರೊಂದಿಗೆ ಐಪಿಎಲ್‌ನ 13ನೇ ಆವೃತ್ತಿ ಆರಂಭದ ಹೊತ್ತಿಗೆ ಭಾರತ ತಂಡ ಒಟ್ಟು 8 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನೂ ಆಡಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com