ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್: ಟೀಂ ಇಂಡಿಯಾ ಸನಿಹದಲ್ಲಿ ಆಸ್ಟ್ರೇಲಿಯಾ

ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-0 ಅಂತರದ ಕ್ಲೀನ್ ಸ್ವೀಪ್ ಗೆಲುವು  ದಾಖಲಿಸಿರುವ ಆಸ್ಟ್ರೇಲಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತದ ಸನಿಹದಲ್ಲಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ

ಸಿಡ್ನಿ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-0 ಅಂತರದ ಕ್ಲೀನ್ ಸ್ವೀಪ್ ಗೆಲುವು  ದಾಖಲಿಸಿರುವ ಆಸ್ಟ್ರೇಲಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತದ ಸನಿಹದಲ್ಲಿದೆ.

ನ್ಯೂಜಿಲೆಂಡ್ ವಿರುದ್ಧ ಎಲ್ಲ ಮೂರು ಪಂದ್ಯಗಳನ್ನು ಗೆದ್ದಿರುವ ಆಸೀಸ್ ಪೂರ್ಣ 120 ಅಂಕ ಕಲೆ ಹಾಕಿದೆ. ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ ಏಳು ಗೆಲುವಿನೊಂದಿಗೆ ಒಟ್ಟು 296 ಅಂಕಗಳನ್ನು ಸಂಪಾದಿಸಿದೆ. ಅಗ್ರಸ್ಥಾನದಲ್ಲಿರುವ ಭಾರತ ಎಲ್ಲ ಏಳು ಪಂದ್ಯಗಳನ್ನು ಗೆದ್ದು ಒಟ್ಟು 360 ಅಂಕಗಳನ್ನು ಪಡೆದಿದೆ.

ಭಾರತಕ್ಕಿಂತಲೂ ಆಸೀಸ್ ಕೇವಲ 64 ಅಂಕಗಳ ಹಿನ್ನಡೆಯಲ್ಲಿದೆ. ಇಲ್ಲಿ ಭಾರತ ಹಾಗೂ ಆಸೀಸ್ ತಲಾ ಮೂರು ಸರಣಿಗಳಲ್ಲಿ ಭಾಗವಹಿಸಿದೆ ಎಂಬುದು ಗಮನಾರ್ಹವೆನಿಸುತ್ತದೆ. ಭಾರತ ತನ್ನೆಲ್ಲ ಪಂದ್ಯಗಳನ್ನು ತವರಿನಲ್ಲೇ ಆಡಿದ್ದು, ಇನ್ನಷ್ಟೇ ನೈಜ ಸವಾಲು ಎದುರಾಗಬೇಕಿದೆ. ಹೊಸ ವರ್ಷದಲ್ಲಿ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳುತ್ತಿರುವ ಭಾರತ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com