ಐಸಿಸಿ ಟಿ-20 ಬ್ಯಾಟಿಂಗ್ ಶ್ರೇಯಾಂಕ: ರಾಹುಲ್ 6, ವಿರಾಟ್ ಕೊಹ್ಲಿಗೆ 9ನೇ ಸ್ಥಾನ

ಐಸಿಸಿ ಟಿ-20 ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ಬಿಡುಗಡೆಯಾಗಿದ್ದು,ಆರಂಭಿಕ ಆಟಗಾರ ಕೆಎಲ್ ರಾಹುಲ್ ಆರನೇ ಸ್ಥಾನದಲ್ಲಿದ್ದರೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 9ನೇ ಸ್ಥಾನ ಪಡೆದುಕೊಂಡಿದ್ದಾರೆ.
ಕೆ.ಎಲ್. ರಾಹುಲ್
ಕೆ.ಎಲ್. ರಾಹುಲ್

ದುಬೈ:  ಐಸಿಸಿ ಟಿ-20 ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ಬಿಡುಗಡೆಯಾಗಿದ್ದು,ಆರಂಭಿಕ ಆಟಗಾರ ಕೆಎಲ್ ರಾಹುಲ್ ಆರನೇ ಸ್ಥಾನದಲ್ಲಿದ್ದರೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 9ನೇ ಸ್ಥಾನ ಪಡೆದುಕೊಂಡಿದ್ದಾರೆ.

ಶ್ರೀಲಂಕಾ- ಭಾರತ ನಡುವಣ ಮೂರು ಪಂದ್ಯಗಳ ಸರಣಿ ಮುಕ್ತಾಯಗೊಂಡ ಬಳಿಕ ಐಸಿಸಿ ಟಿ-20 ಶ್ರೇಯಾಂಕವನ್ನು ಪರಿಷ್ಕರಿಸಲಾಗಿದೆ.  ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಿಂದ ಗೆಲುವು ಪಡೆದಿತ್ತು.

26 ಪಾಯಿಂಟ್ ಗಳನ್ನು ಪಡೆದಿರುವ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ರಾಹುಲ್ ಇದೀಗ 760 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ 45 ಹಾಗೂ 54 ರನ್ ಗಳನ್ನು ಪಡೆಯುವ ಮೂಲಕ ಆಸ್ಟ್ರೇಲಿಯಾದ ಗ್ಲೇನ್ ಮ್ಯಾಕ್ಸ್ ವೆಲ್  ಅವರಿಗಿಂತ ಕೆಳಗೆ ಆರನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿರುವ ಅಗ್ರಸ್ಥಾನದಲ್ಲಿರುವ ಕೊಹ್ಲಿ ಟೀ-20ಯಲ್ಲಿ 9ನೇ ಸ್ಥಾನದಲ್ಲಿದ್ದಾರೆ. ಶಿಖರ್ ಧವನ್ 15ನೇ ಸ್ಥಾನದಲ್ಲಿದ್ದಾರೆ. ಮನೀಷ್ ಪಾಂಡೆ 70ನೇ ಕ್ರಮಾಂಕದಲ್ಲಿದ್ದಾರೆ. 

ಈ ವರ್ಷದ ಮೊದಲ ಟಿ-20 ಐಸಿಸಿ ಬೌಲರ್ ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ಬೌಲರ್ ನವದೀಪ್ ಸೈನಿ 146ರಿಂದ 98ನೇ ಸ್ಥಾನಕ್ಕೆ ಜಿಗಿದಿದ್ದರೆ ಶ್ರಾದುಲ್ ಠಾಕೂರ್ 92ನೇ ಸ್ಥಾನದಲ್ಲಿದ್ದಾರೆ. ಜಸ್ಪ್ರೀತ್ ಬೂಮ್ರಾ 8ನೇ ಸ್ಥಾನದಿಂದ 39ನೇ ಸ್ಥಾನಕ್ಕೆ ತಳಲ್ಪಟ್ಟಿದ್ದಾರೆ. 

ಐಸಿಸಿ ತಂಡಗಳ ಪೈಕಿ ಭಾರತ 260 ಪಾಯಿಂಟ್ ಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಶ್ರೀಲಂಕಾ ಎರಡು ಅಂಕಗಳನ್ನು ಕಳೆದುಕೊಂಡಿದ್ದು, 236 ಪಾಯಿಂಟ್ ಗಳನ್ನು ಹೊಂದಿದೆ. ಅಪ್ಘಾನಿಸ್ತಾನದ ಪಾಯಿಂಟ್ ಕೂಡಾ ಇಷ್ಟೇ ಆಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com