ಆಸೀಸ್ ವಿರುದ್ಧದ 2ನೇ ಏಕದಿನ ಪಂದ್ಯದಿಂದ ರಿಷಬ್ ಪಂತ್ ಔಟ್, ಕೀಪರ್ ಯಾರು?

ಜನವರಿ 17ರಂದು ರಾಜ್‌ಕೋಟ್ ನಲ್ಲಿ ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟ್ಸ್‌‌ಮನ್ ರಿಷಬ್ ಪಂತ್ ಹೊರಗುಳಿಯಲಿದ್ದಾರೆ.
ರಿಷಬ್ ಪಂತ್
ರಿಷಬ್ ಪಂತ್

ಮುಂಬೈ: ಜನವರಿ 17ರಂದು ರಾಜ್‌ಕೋಟ್ ನಲ್ಲಿ ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟ್ಸ್‌‌ಮನ್ ರಿಷಬ್ ಪಂತ್ ಹೊರಗುಳಿಯಲಿದ್ದಾರೆ.

ಮಂಗಳವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದನೇ ಏಕದಿನ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್‌ ಎಸೆತದಲ್ಲಿ ಚೆಂಡು ಪಂತ್ ಹೆಲ್ಮೇಟ್‌ಗೆ ಬಡಿದಿತ್ತು. ಪರಿಣಾಮ ಗಾಯವಾಗಿತ್ತು. ಈ ಹಿನ್ನಲೆಯಲ್ಲಿ ಅವರು ಆ ಪಂದ್ಯದಲ್ಲಿ ಅವರು ವಿಕೆಟ್ ಕೀಪಿಂಗ್ ಮಾಡಿರಲಿಲ್ಲ. ಅವರ ಸ್ಥಾನದಲ್ಲಿ ಕೆ.ಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿಭಾಯಿಸಿದ್ದರು.

ಪಂತ್ ತಲೆಗೆ ಚೆಂಡು ತಾಗಿ ಪೆಟ್ಟಾದ ಬಳಿಕ ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿತ್ತು. ರಾತ್ರಿಯಿಡಿ ಅವರ ಮೇಲೆ ತೀವ್ರ ನಿಗಾ ವಹಿಸಲಾಗಿತ್ತು. ಬುಧವಾರ ಅವರನ್ನು ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಿದ ಬಳಿಕ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ  ಪುನಶ್ಚೇತನ ಕಾರ್ಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com