ಮೇಲಕ್ಕೆ ಜಂಪ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ಕನ್ನಡಿಗ ಮನೀಶ್ ಪಾಂಡೆ, ವಿಡಿಯೋ ವೈರಲ್!

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕು ಎಂಬ ಒತ್ತಡದಲ್ಲಿರುವ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿ 340 ರನ್ ಕಲೆಹಾಕಿದೆ. ಇನ್ನು ಮೊದಲ ಪಂದ್ಯದಲ್ಲಿ ಶತಕ ಸಿಡಿಸಿ ಆಸ್ಟ್ರೇಲಿಯಾ ಗೆಲುವಿಗೆ ಕಾರಣರಾಗಿದ್ದ ಡೇವಿಡ್ ವಾರ್ನರ್ ರನ್ನು ಮನೀಶ್ ಪಾಂಡೆ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಔಟ್ ಮಾಡಿದ್ದಾರೆ.

Published: 17th January 2020 07:29 PM  |   Last Updated: 17th January 2020 07:29 PM   |  A+A-


Manish Pandey

ಮನೀಶ್ ಪಾಂಡೆ

Posted By : Vishwanath S
Source : Online Desk

ರಾಜಕೋಟ್: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕು ಎಂಬ ಒತ್ತಡದಲ್ಲಿರುವ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿ 340 ರನ್ ಕಲೆಹಾಕಿದೆ. ಇನ್ನು ಮೊದಲ ಪಂದ್ಯದಲ್ಲಿ ಶತಕ ಸಿಡಿಸಿ ಆಸ್ಟ್ರೇಲಿಯಾ ಗೆಲುವಿಗೆ ಕಾರಣರಾಗಿದ್ದ ಡೇವಿಡ್ ವಾರ್ನರ್ ರನ್ನು ಮನೀಶ್ ಪಾಂಡೆ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಔಟ್ ಮಾಡಿದ್ದಾರೆ.

ರಾಜಕೋಟ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊಹಮ್ಮದ್ ಶಮಿ ಬೌಲಿಂಗ್ ನಲ್ಲಿ ಡೇವಿಡ್ ವಾರ್ನರ್ ಆಫ್ ಸೈಡ್ ನಲ್ಲಿ ಬಿರುಸಾಗಿ ಹೊಡೆದರು. ಈ ವೇಳೆ ಮನೀಶ್ ಪಾಂಡೆ ನಿರ್ದಿಷ್ಠವಾಗಿ ಮೇಲಕ್ಕೆ ಜಂಪ್ ಮಾಡಿ ಒಂದೇ ಕೈಯಲ್ಲಿ ಕ್ಯಾಚ್ ಹಿಡಿಯುವ ಮೂಲಕ ಸೂಪರ್ ಕ್ಯಾಚ್ ಹಿಡಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿರುವ ಟೀಂ ಇಂಡಿಯಾ ಇದೀಗ ಬೌಲರ್ ಗಳು ನಿಖರವಾಗಿ ಬೌಲಿಂಗ್ ದಾಳಿ ನಡೆಸಿದ್ದಾರೆ. ಇನ್ನು ಎದುರಾಳಿ ತಂಡಗಳನ್ನು ಕಟ್ಟಿಹಾಕುವ ಸಲುವಾಗಿ ಅತ್ಯುತ್ತಮ ಫೀಲ್ಡಿಂಗ್ ಸಹ ನಿರ್ವಹಿಸುತ್ತಿದೆ. 

Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp