ಭಾರತ ಎ ಪರ ಸ್ಫೋಟಕ ಶತಕ ಸಿಡಿಸಿ ಮತ್ತೊಮ್ಮೆ ಎಚ್ಚರಿಕೆ ನೀಡಿದ ಪೃಥ್ವಿ ಶಾ

ಭಾರತ ಟೆಸ್ಟ್ ತಂಡಕ್ಕೆ ಮರಳುವ ತುಡಿತದಲ್ಲಿರುವ ಮುಂಬೈ ಬ್ಯಾಟ್ಸ್ ಮನ್ ಪೃಥ್ವಿ ಶಾ ನ್ಯೂಜಿಲೆಂಡ್ ಎ ವಿರುದ್ಧದ ಎರಡನೇ ಅನಧಿಕೃತ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ.

Published: 19th January 2020 12:00 PM  |   Last Updated: 19th January 2020 12:00 PM   |  A+A-


Prithvi Shaw Slams 100-Ball 150 In New Zealand

ಭಾರತ ಎ ಪರ ಸ್ಫೋಟಕ ಶತಕ ಸಿಡಿಸಿ ಮತ್ತೊಮ್ಮೆ ಎಚ್ಚರಿಕೆ ನೀಡಿದ ಪೃಥ್ವಿ ಶಾ

Posted By : Srinivas Rao BV
Source : UNI

ನವದೆಹಲಿ: ಭಾರತ ಟೆಸ್ಟ್ ತಂಡಕ್ಕೆ ಮರಳುವ ತುಡಿತದಲ್ಲಿರುವ ಮುಂಬೈ ಬ್ಯಾಟ್ಸ್ ಮನ್ ಪೃಥ್ವಿ ಶಾ ನ್ಯೂಜಿಲೆಂಡ್ ಎ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಆ ಮೂಲಕ ಮತ್ತೊಮ್ಮೆ ರಾಷ್ಟ್ರೀಯ ತಂಡದ ಆಯ್ಕೆದಾರರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಕರ್ನಾಟಕ ವಿರುದ್ಧ ರಣಜಿ ಟ್ರೋಫಿ ಪಂದ್ಯದಲ್ಲಿ ಭುಜಕ್ಕೆ ಚೆಂಡು ತಗುಲಿಸಿಕೊಂಡು ಗಾಯಗೊಂಡಿದ್ದ ಪೃಥ್ವಿ ಶಾ ಇತ್ತೀಚಿಗಷ್ಟೆ ಚೇತರಿಸಿಕೊಂಡು ಭಾರತ ಎ ತಂಡಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಆರಂಭಿಕನಾಗಿ ಕಣಕ್ಕೆ ಇಳಿದ ಪೃಥ್ವಿ ಶಾ ಅಬ್ಬರದ ಬ್ಯಾಟಿಂಗ್ ಗೆ ಮೊರೆ ಹೋದರು.

Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp