ಭಾರತ ತಂಡದ ಬ್ಯಾಟಿಂಗ್ ವಿಭಾಗವನ್ನು ಕೊಂಡಾಡಿದ ರವಿಶಾಸ್ತ್ರಿ

ಮೊದಲನೇ ಪಂದ್ಯದಲ್ಲಿ 10 ವಿಕೆಟ್ ಗಳ ಹೀನಾಯ ಸೋಲಿನ ಹೊರತಾಗಿಯೂ ಮೂರನೇ ಪಂದ್ಯದಲ್ಲಿ ಏಳು ವಿಕೆಟ್ ಗಳಿಂದ ಗೆದ್ದು 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ರದರ್ಶನವನ್ನು ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಶ್ಲಾಘಿಸಿದ್ದಾರೆ.

Published: 20th January 2020 11:48 AM  |   Last Updated: 20th January 2020 11:48 AM   |  A+A-


Ravi Shastri praises India after series win

ಭಾರತ ತಂಡದ ಬ್ಯಾಟಿಂಗ್ ವಿಭಾಗವನ್ನು ಕೊಂಡಾಡಿದ ರವಿಶಾಸ್ತ್ರಿ

Posted By : Srinivas Rao BV
Source : Online Desk

ಬೆಂಗಳೂರು: ಮೊದಲನೇ ಪಂದ್ಯದಲ್ಲಿ 10 ವಿಕೆಟ್ ಗಳ ಹೀನಾಯ ಸೋಲಿನ ಹೊರತಾಗಿಯೂ ಮೂರನೇ ಪಂದ್ಯದಲ್ಲಿ ಏಳು ವಿಕೆಟ್ ಗಳಿಂದ ಗೆದ್ದು 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ರದರ್ಶನವನ್ನು ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಶ್ಲಾಘಿಸಿದ್ದಾರೆ.

ಪಂದ್ಯದ ಬಳಿಕ ಟಿವಿ ವಾಹಿನಿವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ”ನಮ್ಮ ತಂಡದ ಆಟಗಾರರು ಅದ್ಭುತ ಪ್ರದರ್ಶನ ತೋರಿದರು. ಮುಂಬೈ ಪಂದ್ಯದಲ್ಲಿನ ಸೋಲು, ಸತತ ಮೂರೂ ಪಂದ್ಯಗಳಲ್ಲಿನ ಟಾಸ್ ಸೋತರೂ ನಮ್ಮವರು ಎರಡೂ ಪಂದ್ಯಗಳಲ್ಲಿ ಸತತವಾಗಿ ಗೆದ್ದು ಸರಣಿಯನ್ನು ವಶಪಡಿಸಿಕೊಂಡಿದ್ದಾರೆ. ನಾವು ಕೆಳಮಟ್ಟದ ತಂಡದ ವಿರುದ್ಧ ಆಡಿದ್ದೇವೆ ಎಂದು ಯಾರೂ ಹೇಳಲಾರರು,” ಎಂದು ತಿಳಿಸಿದರು.

ಭಾನುವಾರದ ಪಂದ್ಯದ ಡೆತ್ ಓವರ್ ಗಳಲ್ಲಿ ಮೊಹಮ್ಮದ್ ಶಮಿ ಶತಕ ಗಳಿಸಿದ್ದ ಸ್ಟೀವನ್ ಸ್ಮಿತ್ ಸೇರಿದಂತೆ  ಮೂರು ವಿಕೆಟ್ ಕಿತ್ತರು. ಇದರಿಂದ ಆಸ್ಟ್ರೇಲಿಯಾ ತಂಡವನ್ನು 286/9 ಕ್ಕೆ ನಿಯಂತ್ರಿಸಲಾಗಿತ್ತು. ಆದರೆ, 27 ಇತರ ರನ್ ನೀಡಲಾಗಿತ್ತು.

Stay up to date on all the latest ಕ್ರಿಕೆಟ್ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp