ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅಜಿತ್ ಅಗರ್ಕರ್ ಪೈಪೋಟಿ

ಒಂದು ಕಾಲದಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಪ್ರಜ್ವಲಿಸಿದ್ದ ಮಾಜಿ ಪೇಸರ್ ಅಜಿತ್ ಅಗರ್ಕರ್ ಬಿಸಿಸಿಐ ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.
ಅಜಿತ್ ಅಗರ್ಕರ್
ಅಜಿತ್ ಅಗರ್ಕರ್

ಮುಂಬೈ: ಒಂದು ಕಾಲದಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಪ್ರಜ್ವಲಿಸಿದ್ದ ಮಾಜಿ ಪೇಸರ್ ಅಜಿತ್ ಅಗರ್ಕರ್ ಬಿಸಿಸಿಐ ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.

ಶುಕ್ರವಾರ (ಜನವರಿ ೨೪) ಅರ್ಜಿಸಲ್ಲಿಕೆಗೆ ಅಂತಿಮ ದಿನವಾಗಿತ್ತು ಕೊನೆಗಳಿಗೆಯಲ್ಲಿ ಅರ್ಗಕರ್ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಸೃಷ್ಟಿಯಾಗಿದೆ.

ಈವರೆಗೆ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದವರ ಪೈಕಿ 42 ವರ್ಷದ ಅಜಿತ್ ಅಗರ್ಕರ್ ಪ್ರಸಿದ್ಧ ಕ್ರಿಕೆಟಿಗರಾಗಿದ್ದು, ಅಧ್ಯಕ್ಷರಾಗುವ ಸಾಧ್ಯತೆಗಳು ಹೆಚ್ಚು. ಮುಂಬೈ ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅಗರ್ಕರ್, ಈಗ ರಾಷ್ಟ್ರೀಯ ಆಯ್ಕೆದಾರ ಹುದ್ದೆಗೆ ಅರ್ಜಿ ಸಲ್ಲಿಸಿರುವುದನ್ನು ದೃಢ ಪಡಿಸಿದ್ದಾರೆ.

ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಮುಂದಿನ ಆಯ್ಕೆ ಸಮಿತಿ ಮುಖ್ಯಸ್ಥ ಎಂದೇ ಹೇಳಲಾಗುತ್ತಿತ್ತು. ಆದರೆ ಇದೀಗ ಈ ಈ ರೇಸ್‌ನಲ್ಲಿ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಹೆಸರು ಮುಂಚೂಣಿಯಲ್ಲಿದೆ.

ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಬಂದಿರುವ ಅರ್ಜಿಗಳ ಪೈಕಿ ಅಜಿತ್ ಅಗರ್ಕರ್ ಹಾಗೂ ಶಿವರಾಮಕೃಷ್ಣನ್ ಹೊರತು ಪಡಿಸಿದರೆ,  ಮಾಜಿ ವಿಕೆಟ್ ಕೀಪರ್ ನಯನ್ ಮೋಂಗಿಯಾಾ, ಚೇಚನ್ ಶರ್ಮಾ, ಹಾಗೂ ರಾಜೇಶ್ ಚೌಹ್ಹಾನ್ ಅರ್ಜಿ ಹಾಕಿದ್ದಾರೆ.

2013ರಲ್ಲಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಅಜಿತ್ ಅಗರ್ಕರ್, 1998ರಿಂದ 2007ರ ವರೆಗೆ ಟೀಂ ಇಂಡಿಯಾ ಪ್ರಮುಖ ವೇಗಿಯಾಗಿ ಗುರಿತಿಸಿಕೊಂಡಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಭಾರತದ ಮೂರನೇ ಬೌಲರ್ ಎಂಬ ಗೌರವಕ್ಕೆ ಅಗರ್ಕರ್ ಪಾತ್ರರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com