ಮೊದಲ ಟಿ20: ಕಿವೀಸ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ನ್ಯೂಜಿಲೆಂಡ್ ಭರ್ಜರಿ ಆರಂಭ

ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಗೆ ಮಾಡಿಕೊಂಡಿದ್ದು, ಬ್ಯಾಟಿಂಗ್ ನಲ್ಲಿ ಕಿವೀಸ್ ಪಡೆ ಭರ್ಜರಿ ಆರಂಭ ಪಡೆದಿದೆ.
ಟಾಸ್ ಗೆದ್ದ ಭಾರತ
ಟಾಸ್ ಗೆದ್ದ ಭಾರತ

ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಗೆ ಮಾಡಿಕೊಂಡಿದ್ದು, ಬ್ಯಾಟಿಂಗ್ ನಲ್ಲಿ ಕಿವೀಸ್ ಪಡೆ ಭರ್ಜರಿ ಆರಂಭ ಪಡೆದಿದೆ.

ನ್ಯೂಜಿಲೆಂಡ್ ಆಕ್ಲೆಂಡ್ ನಲ್ಲಿರುವ ಈಡನ್ ಪಾರ್ಕ್ ನಲ್ಲಿ ಇಂದು ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಟಾಸ್ ಸೋತರೂ ಬ್ಯಾಟಿಂಗ್ ಆರಂಭಿಸಿರುವ ನ್ಯೂಜಿಲೆಂಡ್ ತಂಡ ಭರ್ಜರಿ ಆರಂಭ ಪಡೆದಿದೆ. ಆರಂಭಿಕರಾಗಿ ಕಣಕ್ಕಿಳಿರುವ ಕೊಲಿನ್ ಮನ್ರೋ (31 ರನ್, 16 ಎಸೆತ) ಮತ್ತು ಮಾರ್ಟಿನ್ ಗಪ್ಟಿಲ್ (14 ರನ್, 10 ಎಸೆತ) ಸ್ಫೋಟಕ ಆರಂಭ ನೀಡಿದ್ದು, ಇತ್ತೀಚಿನ ವರದಿಗಳು ಬಂದಾಗ 4.2 ಓವರ್ ನಲ್ಲಿ ನ್ಯೂಜಿಲೆಂಡ್ ತಂಡ ವಿಕೆಟ್ ನಷ್ಟವಿಲ್ಲದೇ 49 ರನ್ ಗಳಿಸಿತ್ತು.

ರಿಷಬ್ ಪಂತ್, ವಾಷಿಂಗ್ ಟನ್ ಸುಂದರ್ ಡ್ರಾಪ್
ಇನ್ನುಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ರಿಷಬ್ ಪಂತ್, ವಾಷಿಂಗ್ ಟನ್ ಸುಂದರ್ ಅವರ ಬದಲಿಗೆ ಶಿವಂ ದುಬೆ ಮತ್ತು ಶೂರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ.

ತಂಡಗಳು ಇಂತಿವೆ
ಭಾರತ: ರೋಹಿತ್ ಶರ್ಮಾ, ಲೋಕೇಶ್ ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಶಿವಂ ದುಬೆ, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಯುಜುವೇಂದ್ರ ಚಹಲ್, ಮೊಹಮ್ಮದ್ ಶಮಿ

ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಕಾಲಿನ್ ಮುನ್ರೊ, ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಾಸ್ ಟೇಲರ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಬ್ಲೇರ್ ಟಿಕ್ನರ್, ಹಮೀಶ್ ಬೆನೆಟ್

ಲೈವ್ ಸ್ಕೋರ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com