ಏಷ್ಯಾಕಪ್ ಟೂರ್ನಿಗೆ ಭಾರತ ಬರದಿದ್ದರೆ, 2021ರ ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ಪಾಲ್ಗೊಳ್ಳುವುದಿಲ್ಲ: ಪಿಸಿಬಿ ಎಚ್ಚರಿಕೆ

ಏಷ್ಯಾಕಪ್ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಬರದಿದ್ದರೇ, 2021ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಎಚ್ಚರಿಕೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಲಾಹೋರ್: ಏಷ್ಯಾಕಪ್ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಬರದಿದ್ದರೇ, 2021ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಮಾತನಾಡಿರುವ ಪಿಸಿಬಿ ಕಾರ್ಯಾಧ್ಯಕ್ಷ ವಸೀಮ್ ಖಾನ್ ಅವರು, ಟಿ20 ಏಷ್ಯಾಕಪ್ ಆಯೋಜನೆಯಿಂದ ಪಾಕಿಸ್ತಾನ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಬಾರಿ ಟಿ20 ಏಷ್ಯಾಕಪ್ ಪಾಕಿಸ್ತಾನದಲ್ಲಿ ನಡೆಯುತ್ತಿರುವುದರಿಂದ ಈ ಬಾರಿ ಭಾರತ ತಂಡ ಟೂರ್ನಿಯಿಂದ ಹೊರಗುಳಿಯುವ ಕುರಿತು ಊಹಾಪೋಹಗಳಿವೆ. ಆದರೆ ಅವು ಊಹಾಪೋಹಗಳು ಮಾತ್ರ. ಈ ಕುರಿತಂತೆ ನಮಗೆ ಅಧಿಕೃತ ಮಾಹಿತಿ ಇಲ್ಲ. ಆದರೆ ಒಂದು ವೇಳೆ ಭಾರತ ತಂಡ ಟಿ20 ಏಷ್ಯಾಕಪ್ ಟೂರ್ನಿಯಿಂದ ಹೊರಗಳಿದರೆ, 2021ರಲ್ಲಿ ಭಾರತದಲ್ಲಿ ನಡೆಯುವ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಪಾಕಿಸ್ತಾನ ಸರಣಿಗೆ ತಂಡ ಕಳುಹಿಸಿದ ಬಳಿಕ ಇಲ್ಲಿ 2 ಐಸಿಸಿ ಟೆಸ್ಟ್ ವಿಶ್ವಕಪ್ ಚಾಂಪಿಯನ್ ಪಂದ್ಯಗಳು ನಡೆದಿವೆ. ಹಾಗೆಂದ ಮೇಲೆ ಐಸಿಸಿ ಅಧಿಕೃತವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆಸಲು ಐಸಿಸಿ ಮಾನ್ಯತೆ ನೀಡಿದಂತೆಯೇ. ಅಲ್ಲದೆ ಮುಂಬರುವ ಸೆಪ್ಟೆಂಬರ್ ನಲ್ಲಿ ಬಾಂಗ್ಲಾದೇಶ ಪಾಕಿಸ್ತಾನ ಪ್ರವಾಸ ಕೈಗೊಳ್ಳುತ್ತಿದೆ. ಹೀಗಾಗಿ ಪಾಕಿಸ್ತಾನದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆಸಲು ಯಾವುದೇ ಅಡ್ಡಿ ಇಲ್ಲ ಎಂದು ಖಾನ್ ಸ್ಪಷ್ಟ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com