ನಾಲ್ಕನೇ ಬಾರಿ 200ಕ್ಕೂ ಹೆಚ್ಚು ರನ್ ಬೆನ್ನಟ್ಟಿ ಗೆದ್ದು ದಾಖಲೆ ಬರೆದ ಟೀಂ ಇಂಡಿಯಾ

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಟಿ-20 ಕ್ರಿಕೆಟ್ ನಲ್ಲಿ ಮತ್ತೊಮ್ಮೆ 200ಕ್ಕಿಂತ ಹೆಚ್ಚಿನ ರನ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ ಗೆದ್ದು ದಾಖಲೆ ಬರೆದಿದೆ.

Published: 25th January 2020 11:06 AM  |   Last Updated: 25th January 2020 11:06 AM   |  A+A-


Team India

ಟೀಂ ಇಂಡಿಯಾ

Posted By : Vishwanath S
Source : UNI

ನವದೆಹಲಿ: ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಟಿ-20 ಕ್ರಿಕೆಟ್ ನಲ್ಲಿ ಮತ್ತೊಮ್ಮೆ 200ಕ್ಕಿಂತ ಹೆಚ್ಚಿನ ರನ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ ಗೆದ್ದು ದಾಖಲೆ ಬರೆದಿದೆ.

ನ್ಯೂಜಿಲೆಂಡ್ ಐದು ವಿಕೆಟ್‌ಗೆ 203 ರನ್ ಗಳಿಸಿದರೆ ಭಾರತ ನಾಲ್ಕು ವಿಕೆಟ್‌ಗೆ 204 ರನ್ ಗಳಿಸಿತು. ಭಾರತ ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧ 2013ರಲ್ಲಿ ರಾಜ್‌ಕೋಟ್‌ನಲ್ಲಿ 202 ರನ್, 2009ರಲ್ಲಿ ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ಧ 207 ರನ್ ಮತ್ತು 2019ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಹೈದರಾಬಾದ್‌ನಲ್ಲಿ 208 ರನ್ ಗಳಿಸಿತ್ತು.

ಅಕ್ಟೋಬರ್ ನಲ್ಲಿ ಐಸಿಸಿ ಟಿ20 ವಿಶ್ವಕಪ್ ನಡೆಯಲಿದ್ದು ಭಾರತ ತಂಡದಲ್ಲಿ ಪ್ರತಿಯೊಬ್ಬ ಆಟಗಾರನು ಉತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. ಇದು ತಂಡದ ಸಾಮರ್ಥ್ಯವನ್ನು ಹೆಚ್ಚಿಸಿದೆ. 

ನ್ಯೂಜಿಲ್ಯಾಂಡ್ ವಿರುದ್ಧ 5 ಪಂದ್ಯಗಳ ಟಿ20 ಸರಣಿಯುತ್ತಿದ್ದು ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲುವ ಮೂಲಕ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp