ಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಶಶಾಂಕ್ ಮನೋಹರ್

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ನ ಮೊದಲ ಸ್ವತಂತ್ರ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಭಾರತದ ಶಶಾಂಕ್ ಮನೋಹರ್ ಅವರ ಅಧಿಕಾರಾವಧಿ ಬುಧವಾರ ಮುಕ್ತಾಯಗೊಂಡಿದೆ.

Published: 01st July 2020 08:23 PM  |   Last Updated: 01st July 2020 08:23 PM   |  A+A-


Shashank Manohar

ಶಶಾಂಕ್ ಮನೋಹರ್

Posted By : Vishwanath S
Source : UNI

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ನ ಮೊದಲ ಸ್ವತಂತ್ರ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಭಾರತದ ಶಶಾಂಕ್ ಮನೋಹರ್ ಅವರ ಅಧಿಕಾರಾವಧಿ ಬುಧವಾರ ಮುಕ್ತಾಯಗೊಂಡಿದೆ.

ಐಸಿಸಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವವರೆಗೆ ಉಪಾಧ್ಯಕ್ಷ ಇಮ್ರಾನ್ ಖ್ವಾಜಾ ಅವರು ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 

ಐಸಿಸಿ ಮುಖ್ಯಸ್ಥ ಶಶಾಂಕ್ ಮನೋಹರ್ ಅವರು ಎರಡು ವರ್ಷಗಳ ಅಧಿಕಾರಾವಧಿಯ ನಂತರ ಅಧಿಕಾರದಿಂದ ಕೆಳಗಿಳಿದಿದ್ದಾರೆ.

ಬುಧವಾರ ಐಸಿಸಿ ಮಂಡಳಿ ಸಭೆ ನಡೆಸಲಾಗಿದ್ದು, ಉಪಾಧ್ಯಕ್ಷ ಇಮ್ರಾನ್ ಖ್ವಾಜಾ ಅವರು ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವವರೆಗೂ ಅಧ್ಯಕ್ಷರ ಜವಾಬ್ದಾರಿಗಳನ್ನು ವಹಿಸಿಕೊಳ್ಳುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Stay up to date on all the latest ಕ್ರಿಕೆಟ್ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp