2011 ರ ವಿಶ್ವಕಪ್ ನಲ್ಲಿ ಫಿಕ್ಸಿಂಗ್ ಆರೋಪ: 10 ಗಂಟೆಗಳ ಕಾಲ ಸಂಗಕ್ಕಾರ ವಿಚಾರಣೆ

2011 ರ ವಿಶ್ವಕಪ್ ಟೂರ್ನಿಯ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. 

Published: 03rd July 2020 10:44 AM  |   Last Updated: 03rd July 2020 12:40 PM   |  A+A-


Kumar Sangakkara

ಕುಮಾರ ಸಂಗಕ್ಕಾರ

Posted By : Srinivas Rao BV
Source : PTI

ಕೊಲೊಂಬೊ: 2011 ರ ವಿಶ್ವಕಪ್ ಟೂರ್ನಿಯ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 2011 ರಲ್ಲಿ ತಂಡವನ್ನು ಮುನ್ನಡೆಸಿದ್ದ ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. 

ಶ್ರೀಲಂಕಾದ ಮಾಜಿ ಕ್ರೀಡಾ ಸಚಿವ ಮಹಿಂದಾನಂದ ಅಲುತ್‌ಗಮಗೆ ಲಂಕಾ ತಂಡದ ವಿರುದ್ಧ 2011 ರ ವಿಶ್ವಕಪ್ ಫೈನಲ್ಸ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದರು. ಆದರೆ ಇದಕ್ಕೆ ಸೂಕ್ತ ಸಾಕ್ಷ್ಯಾಧಾರಗಳನ್ನೇನು ನೀಡಿರಲಿಲ್ಲ. ಶ್ರೀಲಂಕಾದ ಕ್ರೀಡಾ ಸಚಿವಾಲಯ ಈ ಸಂಬಂಧ ತನಿಖೆ ಪ್ರಾರಂಭಿಸಿತ್ತು.

ಶ್ರೀಲಂಕಾದ ನ್ಯೂಸ್ ವೈರ್ ಎಂಬ ವೆಬ್ ಸೈಟ್ ಪ್ರಕಟಿಸಿರುವ ವರದಿಯ ಪ್ರಕಾರ ಸಂಗಕ್ಕರ ಅವರನ್ನು ಅಲ್ಲಿನ ಅಧಿಕಾರಿಗಳು 10 ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ್ದು ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. 

ಸಂಗಕ್ಕರ ಅವರನ್ನು ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಲಂಕಾದ ಯುವ ಸಂಘಟನೆ ಸಮಗಿ ತರುಣ ಬಾಲವೇಗಯಾದ ಯುವಕರು ಎಸ್ಎಲ್ ಸಿ ಕಚೇರಿಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದ್ದು ಖ್ಯಾತ ಕ್ರಿಕೆಟ್ ಪಟು ಸಂಗಕ್ಕಾರ ಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸಂಗಕ್ಕಾರ ಅವರ ವಿಚಾರಣೆ ಮುಂದಿನ ವಾರ ನಡೆಯಬೇಕಿತ್ತು. ಆದರೆ ಅವರ ಮನವಿ ಮೇರೆಗೆ ತ್ವರಿತ ವಿಚಾರಣೆ ನಡೆಸಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2011 ರ ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷ ಅರವಿಂದ ಡಿ ಸಿಲ್ವಾ ಹಾಗೂ ಕ್ರಿಕೆಟಿಗ ಉಪುಲ್ ತರಂಗ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದಾರೆ.

Stay up to date on all the latest ಕ್ರಿಕೆಟ್ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp