ಸೌರವ್ ಗಂಗೂಲಿ
ಸೌರವ್ ಗಂಗೂಲಿ

ಸಹೋದರನಿಗೆ ಕೊರೋನಾ ಪಾಸಿಟಿವ್: ಹೋಮ್ ಕ್ವಾರಂಟೈನ್ ನಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತಮ್ಮ ಹಿರಿಯ ಸಹೋದರ ಸ್ನೇಹಶೀಶ್ ಗಂಗೂಲಿಗೆ ಕೊರೋನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ.

ಕೊಲ್ಕತಾ: ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತಮ್ಮ ಹಿರಿಯ ಸಹೋದರ ಸ್ನೇಹಶೀಶ್ ಗಂಗೂಲಿಗೆ ಕೊರೋನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ.

ಗಂಗೂಲಿ ಹಿರಿಯ ಸಹೋದರ ಮಾಜಿ ಕ್ರಿಕೆಟ್ ಆಟಗಾರನಾಗಿದ್ದು ಬೆಲ್ಲೆ ವ್ಯೂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಇರುವುದು ತಿಳಿದು ಬಂದಿದೆ,ನಿನ್ನೆ ಸಂಜೆ ಪರೀಕ್ಷಾ ವರದಿ ಬಂದಿದ್ದು, ಆರೋಗ್ಯ ಇಲಾಖೆಯ ನಿಯಮದ ಪ್ರಕಾರ ಕೆಲವು ಸಮಯ ಸೌರವ್ ಗಂಗೂಲಿ ಹೋಮ್ ಕ್ವಾರಂಟೈನ್ ನಲ್ಲಿರಲು ನಿರ್ಧರಿಸಿದ್ದಾರೆ.ಆದರೆ ಈ ಸಂಬಂಧ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿಲ್ಲ,

Related Stories

No stories found.

Advertisement

X
Kannada Prabha
www.kannadaprabha.com