ದ್ವಿತೀಯ ಟೆಸ್ಟ್: ವಿಂಡೀಸ್ ವಿರುದ್ಧ ಇಂಗ್ಲೆಂಡ್ ಗೆ 113 ರನ್ ಗಳ ಗೆಲುವು, ಸರಣಿ ಜೀವಂತ

ಬಲಗೈ ಮಧ್ಯಮ ವೇಗಿಗಳಾದ ಸ್ಟುವರ್ಟ್ ಬ್ರಾಡ್ ಮತ್ತು ಕ್ರಿಸ್ ವೋಕ್ಸ್ ಅವರ ಕರಾರುವಾಕ್ ದಾಳಿಯ ಬಲದಿಂದ ಆತಿಥೇಯ ಇಂಗ್ಲೆಂಡ್ ತಂಡ 2ನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ 113 ರನ್ ಗಳ ಗೆಲುವು ಸಾಧಿಸಿದೆ.

Published: 20th July 2020 11:26 PM  |   Last Updated: 20th July 2020 11:26 PM   |  A+A-


England-Windies

ಇಂಗ್ಲೆಂಡ್-ವಿಂಡೀಸ್

Posted By : vishwanath
Source : UNI

ಮ್ಯಾಂಚೆಸ್ಟರ್: ಬಲಗೈ ಮಧ್ಯಮ ವೇಗಿಗಳಾದ ಸ್ಟುವರ್ಟ್ ಬ್ರಾಡ್ ಮತ್ತು ಕ್ರಿಸ್ ವೋಕ್ಸ್ ಅವರ ಕರಾರುವಾಕ್ ದಾಳಿಯ ಬಲದಿಂದ ಆತಿಥೇಯ ಇಂಗ್ಲೆಂಡ್ ತಂಡ 2ನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ 113 ರನ್ ಗಳ ಗೆಲುವು ಸಾಧಿಸಿದೆ.

ಇದರೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1ರಲ್ಲಿ ಜೀವಂತವಾಗಿರಿಸಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಜಯ ಗಳಿಸಿತ್ತು.

ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 469 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ 287 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 129 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು ವಿಂಡೀಸ್ ಗೆ 312 ರನ್ ಗಳ ಗುರಿ ನೀಡಿತ್ತು. 

ಈ ಗುರಿ ಬೆನ್ನಟ್ಟಿದ ವಿಂಡೀಸ್ 198 ರನ್ ಗಳಿಗೆ ಆಲೌಟ್ ಆಗಿದ್ದು 113 ರನ್ ಗಳಿಂದ ಸೋಲು ಕಂಡಿದೆ.


Stay up to date on all the latest ಕ್ರಿಕೆಟ್ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp