ವಿರಾಟ್ ಕೊಹ್ಲಿಯನ್ನು ಹಾಡಿ ಹೊಗಳಿದ ಪಾಕಿಸ್ತಾನದ ವೇಗಿ ನಸೀಮ್ ಶಾ 

ಪಾಕಿಸ್ತಾನದ ಯುವ ಕ್ರಿಕೆಟಿಗ, ವೇಗಿ ನಸೀಮ್ ಶಾ, ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಹಾಡಿ ಹೊಗಳಿದ್ದು, ಭಾರತ ಕ್ರಿಕೆಟ್ ತಂಡದ ವಿರುದ್ಧ ಆಡುವುದಕ್ಕೆ ಅವಕಾಶಕ್ಕಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. 
ವಿರಾಟ್ ಕೊಹ್ಲಿಯನ್ನು ಹಾಡಿ ಹೊಗಳಿದ ಪಾಕಿಸ್ತಾನದ ವೇಗಿ ನಸೀಮ್ ಶಾ
ವಿರಾಟ್ ಕೊಹ್ಲಿಯನ್ನು ಹಾಡಿ ಹೊಗಳಿದ ಪಾಕಿಸ್ತಾನದ ವೇಗಿ ನಸೀಮ್ ಶಾ

ಲಾಹೋರ್: ಪಾಕಿಸ್ತಾನದ ಯುವ ಕ್ರಿಕೆಟಿಗ, ವೇಗಿ ನಸೀಮ್ ಶಾ, ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಹಾಡಿ ಹೊಗಳಿದ್ದು, ಭಾರತ ಕ್ರಿಕೆಟ್ ತಂಡದ ವಿರುದ್ಧ ಆಡುವುದಕ್ಕೆ ಅವಕಾಶಕ್ಕಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. 

ಐಸಿಸಿ ಟೂರ್ನಿಗಳಲ್ಲಿ ಮಾತ್ರ ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ. ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿರುವ ನಸೀಮ್ ಶಾ, ತಾವು ವಿರಾಟ್ ಕೊಹ್ಲಿಯನ್ನು ಗೌರವಿಸುವುದಾಗಿ ಹೇಳಿದ್ದಾರೆ. ಆದರೆ ಬಲಿಷ್ಠ ಬ್ಯಾಟಿಂಗ್ ಹೊಂದಿರುವ ಕೊಹ್ಲಿಗೆ ತಾವು ಹೆದರುವುದಿಲ್ಲ ಎಂದೂ ನಸೀಮ್ ಶಾ ಪಾಕ್ ಪ್ಯಾಷನ್.ನೆಟ್ ಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಭಾರತ-ಪಾಕ್ ನಡುವಿನ ಪಂದ್ಯಗಳು ನಡೆಯುವುದೇ ಅಪರೂಪವಾಗಿರುವುದರಿಂದ ಅವುಗಳು ವಿಶೇಷವಾದ ಪಂದ್ಯಗಳಾಗಿವೆ. ನಾನು ಭಾರತದ ವಿರುದ್ಧ ಆಡುವ ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇನೆ. ಭಾರತದ ವಿರುದ್ಧ ನಾನು ಉತ್ತಮ ಬೌಲಿಂಗ್ ಪ್ರದರ್ಶಿಸಬಲ್ಲೆ, ನಮ್ಮ ಅಭಿಮಾನಿಗಳಿಗೆ ನಿರಾಶೆ ಉಂಟುಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎನ್ನುತ್ತಾರೆ ನಸೀಮ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com