ಆಸ್ಟ್ರೇಲಿಯಾ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ಸವಾಲಿನಿಂದ ಕೂಡಿರಲಿದೆ: ರೋಹಿತ್ ಶರ್ಮ

ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಗುಲಾಬಿ ಚೆಂಡಿನ ಟೆಸ್ಟ್ ಪಂದ್ಯ ತಮಗೆ ಸವಾಲಿನಿಂದ ಕೂಡಿರಲಿದೆ ಎಂದು ಭಾರತದ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮ ಅಭಿಪ್ರಾಯಪಟ್ಟಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ನವದೆಹಲಿ: ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಗುಲಾಬಿ ಚೆಂಡಿನ ಟೆಸ್ಟ್ ಪಂದ್ಯ ತಮಗೆ ಸವಾಲಿನಿಂದ ಕೂಡಿರಲಿದೆ ಎಂದು ಭಾರತದ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮ ಅಭಿಪ್ರಾಯಪಟ್ಟಿದ್ದಾರೆ.

ಪ್ರವಾಸಿ ಭಾರತ ತಂಡ ಡಿಸೆಂಬರ್ 11ರಿಂದ ಅಡಿಲೇಡ್ ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಹೊನಲು ಬೆಳಕಿನ ಅಡಿಯಲ್ಲಿ ಆಡಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 3ರಂದು ಆರಂಭವಾದರೆ, ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳು ಕ್ರಮವಾಗಿ ಡಿಸೆಂಬರ್ 26 ಮತ್ತು ಜನವರಿ 3ರಂದು ಶುರುವಾಗಲಿವೆ.

ಆಸ್ಟ್ರೇಲಿಯಾದಲ್ಲಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಬಗ್ಗೆ ಅಭಿಮಾನಿಯೊಬ್ಬ ಕೇಳಿದಾಗ, ರೋಹಿತ್ ಶರ್ಮಾ ಅವರು ಖಚಿತವಾಗಿ ಸವಾಲಾಗಿರುತ್ತಾನೆ ಎಂದು ಉತ್ತರಿಸಿದರು.

ಈ ವರ್ಷದ ಕೊನೆಯಲ್ಲಿ ಭಾರತ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ಬ್ರಿಸ್ಬೇನ್, ಅಡಿಲೇಡ್, ಮೆಲ್ಬೋರ್ನ್ ಮತ್ತು ಸಿಡ್ನಿಯನ್ನು ಅಂತಿಮಗೊಳಿಸಿದೆ.

ಅಭಿಮಾನಿಗಳೊಂದಿಗಿನ ಸಂವಾದದ ಸಮಯದಲ್ಲಿ, ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಮತ್ತು ಇಂಗ್ಲೆಂಡ್ ಕ್ರಿಕೆಟಿಗ ಜೇಸನ್ ರಾಯ್ ಬ್ಯಾಟಿಂಗ್ ನೋಡುವುದನ್ನು ಆನಂದಿಸುವುದಾಗಿ ರೋಹಿತ್ ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com