2011ರ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್: ಮಾಜಿ ಸಚಿವ ಆರೋಪ, ಪುರಾವೆ ನೀಡುವಂತೆ ಸಂಗಕ್ಕಾರ ಸವಾಲು!
2011ರ ಟೀಂ ಇಂಡಿಯಾ ಹಾಗೂ ಲಂಕಾ ನಡುವಿನ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್ ಆಗಿತ್ತು ಎಂದು ಶ್ರೀಲಂಕಾದ ಮಾಜಿ ಕ್ರೀಡಾ ಸಚಿವರ ಆರೋಪವನ್ನು ತಳ್ಳಿ ಹಾಕಿರುವ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅವರು ನಿರೂಪಿಸುವಂತೆ ಸವಾಲು ಹಾಕಿದ್ದಾರೆ.
Published: 18th June 2020 06:06 PM | Last Updated: 18th June 2020 06:06 PM | A+A A-

ಕುಮಾರ ಸಂಗಕ್ಕಾರ
ನವದೆಹಲಿ: 2011ರ ಟೀಂ ಇಂಡಿಯಾ ಹಾಗೂ ಲಂಕಾ ನಡುವಿನ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್ ಆಗಿತ್ತು ಎಂದು ಶ್ರೀಲಂಕಾದ ಮಾಜಿ ಕ್ರೀಡಾ ಸಚಿವರ ಆರೋಪವನ್ನು ತಳ್ಳಿ ಹಾಕಿರುವ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅವರು ನಿರೂಪಿಸುವಂತೆ ಸವಾಲು ಹಾಕಿದ್ದಾರೆ.
ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನೇತೃತ್ವದ ಟೀಂ ಇಂಡಿಯಾ 2011ರಲ್ಲಿ ಲಂಕಾ ವಿರುದ್ಧ 6 ವಿಕೆಟ್ ಗಳಿಂದ ಜಯ ಗಳಿಸಿ ಎರಡನೇ ಬಾರಿಗೆ ವಿಶ್ವಕಪ್ ಟೂರ್ನಿಯನ್ನು ಮುಡಿಗೇರಿಸಿಕೊಂಡಿತ್ತು.
ಈ ಫೈನಲ್ ಪಂದ್ಯ ಮೊದಲೇ ಫಿಕ್ಸ್ ಆಗಿತ್ತು ಎಂದು ಮಾಜಿ ಕ್ರೀಡಾ ಸಚಿವ ಮಹಿಂದಾನಂದ ಅಲುಥ್ ಗಮಗೆ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಮಾಜಿ ಕ್ರಿಕೆಟಿಗ ಕುಮಾರ ಸಂಗಾಕ್ಕಾರ ಪುರಾವೆ ಕೇಳಿ ಸವಾಲು ಹಾಕಿದ್ದಾರೆ.