2011 ವಿಶ್ವಕಪ್ ಫೈನಲ್ ಫಿಕ್ಸಿಂಗ್ ಆರೋಪ: ಕ್ರಿಮಿನಲ್ ತನಿಖೆಗೆ ಶ್ರೀಲಂಕಾ ಆದೇಶ!

2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಫಿಕ್ಸಿಂಗ್ ನಡೆದಿದೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾ ಕ್ರಿಮಿನಲ್ ತನಿಖೆಗೆ ಸೋಮವಾರ ಆದೇಶಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
2011 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಆಟಗಾರರ ಸಂಭ್ರಮದ ಚಿತ್ರ
2011 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಆಟಗಾರರ ಸಂಭ್ರಮದ ಚಿತ್ರ

ಕೊಲಂಬಿಯಾ: 2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಫಿಕ್ಸಿಂಗ್ ನಡೆದಿದೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾ ಕ್ರಿಮಿನಲ್ ತನಿಖೆಗೆ ಸೋಮವಾರ ಆದೇಶಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕ್ರೀಡಾ ಅಪರಾಧಗಳಿಗೆ ಸಂಬಂಧಿಸಿದ ಘಟಕವಾಗಿರುವ ಪೊಲೀಸ್ ನಿರ್ವಹಣೆಯ ಸ್ವತಂತ್ರ ವಿಶೇಷ ತನಿಖಾ ಘಟಕದಿಂದ ಕ್ರಿಮಿನಲ್ ವಿಚಾರಣೆ ಆರಂಭಿಸಲಾಗಿದೆ ಎಂದು  ಕ್ರೀಡಾ ಸಚಿವಾಲಯದ ಕಾರ್ಯದರ್ಶಿ ಕೆ.ಡಿ.ಎಸ್. ರುವಾಂಚಂದ್ರ  ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಮಾರಾಟ ವಾಗುವ ಮೂಲಕ ಭಾರತ ಗೆಲುವು ಸಾಧಿಸಲು ಅನುವು ಮಾಡಿಕೊಟ್ಟಿತ್ತು ಎಂದು ಮಾಜಿ ಕ್ರೀಡಾ ಸಚಿವ ಮಹಿಂದಾನಂದ ಅಲುತ್‌ಗಮಗೆ ಈ ತಿಂಗಳ ಆರಂಭದಲ್ಲಿ ಆರೋಪಿಸಿದ್ದರು. 

1996ರ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ ಅರ್ಜುನ್ ರಣತುಂಗಾ ಕೂಡಾ, 2011ರ ವಿಶ್ವಕಪ್ ಫೈನಲ್ ಪಂದ್ಯದ ಫಲಿತಾಂಶದ ಬಗ್ಗೆ  ಸಂದೇಹ ಪಟ್ಟಿದ್ದರು. ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದರು. 

2011ರ ಫೈನಲ್ ಪಂದ್ಯದ ಮುಖ್ಯ ಆಯ್ಕೆದಾರ ಮತ್ತು ಮಾಜಿ ನಾಯಕ ಅರವಿಂದ ಡಿ ಸಿಲ್ವಾ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ್ದರೂ ನಂತರ ಆರು ವಿಕೆಟ್ ಗಳಿಂದ ಸೋಲಿಗೆ ಶರಣಾಗಿತ್ತು. ಆ ಪಂದ್ಯದಲ್ಲಿ ಸಚಿನ್ ತೆಂಡೊಲ್ಕರ್ ಕೇವಲ 18 ರನ್ ಗಳಿಗೆ ಔಟಾಗುವ ಮೂಲಕ 6 ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿತ್ತು.ಶ್ರೀಲಂಕಾ ತಂಡದ ಕಳಪೆ ಬೌಲಿಂಗ್ ಹಾಗೂ ಫೀಲ್ಡಿಂಗ್ 
ಟೀಂ ಇಂಡಿಯಾ ಗೆಲ್ಲಲು ಕಾರಣವಾಗಿತ್ತು. 

ಅಲುತ್‌ಗಮಗೆ ಐಸಿಸಿಗೆ ದೂರು ನೀಡಲಿ ಎಂದು ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದ ಕುಮಾರ ಸಂಗಕ್ಕರ್ ಹೇಳಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com