ಟೆಸ್ಟ್ ರ‍್ಯಾಂಕಿಂಗ್‌; ಎರಡನೇ ಸ್ಥಾನಕ್ಕೆ ಬಡ್ತಿ ಪಡೆದ ನ್ಯೂಜಿಲೆಂಡ್

ಟೆಸ್ಟ್ ರ‍್ಯಾಂಕಿಂಗ್‌ ನಲ್ಲಿ ವಿಶ್ವದ ನಂಬರ್ ಒನ್ ಸ್ಥಾನ ಹೊಂದಿರುವ ಭಾರತದ ವಿರುದ್ಧ ಎರಡು ಪಂದ್ಯಗಳ ಸರಣಿಯನ್ನು 2–0ರಿಂದ ಗೆದ್ದ ನ್ಯೂಜಿಲೆಂಡ್ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ನಲ್ಲಿ ಎರಡು ಸ್ಥಾನಗಳ ಏರಿಕೆ ಕಂಡಿದ್ದು ಎರಡನೇ ಸ್ಥಾನಕ್ಕೆ ತಲುಪಿದೆ.

Published: 03rd March 2020 12:03 PM  |   Last Updated: 03rd March 2020 12:03 PM   |  A+A-


New Zealand Move To 2nd Spot After Whitewashing India

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ದುಬೈ: ಟೆಸ್ಟ್ ರ‍್ಯಾಂಕಿಂಗ್‌ ನಲ್ಲಿ ವಿಶ್ವದ ನಂಬರ್ ಒನ್ ಸ್ಥಾನ ಹೊಂದಿರುವ ಭಾರತದ ವಿರುದ್ಧ ಎರಡು ಪಂದ್ಯಗಳ ಸರಣಿಯನ್ನು 2–0ರಿಂದ ಗೆದ್ದ ನ್ಯೂಜಿಲೆಂಡ್ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ನಲ್ಲಿ ಎರಡು ಸ್ಥಾನಗಳ ಏರಿಕೆ ಕಂಡಿದ್ದು ಎರಡನೇ ಸ್ಥಾನಕ್ಕೆ ತಲುಪಿದೆ.
  
ಡಿಸೆಂಬರ್- ಜನವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು 0–3ರಲ್ಲಿ ಕಳೆದುಕೊಂಡ ನಂತರ ನ್ಯೂಜಿಲೆಂಡ್ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿತ್ತು. ಆದರೆ ಈಗ ಭಾರತವನ್ನು ಸೋಲಿಸಿದ ನಂತರ ಎರಡನೇ ಸ್ಥಾನದಲ್ಲಿದೆ. ಈ ಸೋಲಿನ ಹೊರತಾಗಿಯೂ, ಭಾರತ ಪ್ರಥಮ ಸ್ಥಾನದಲ್ಲಿದೆ. ಭಾರತವು 116 ಅಂಕಗಳನ್ನು ಹೊಂದಿದೆ. ನ್ಯೂಜಿಲೆಂಡ್ 110 ಅಂಕಗಳನ್ನು ಹೊಂದಿದೆ. 108 ಅಂಕಗಳೊಂದಿಗೆ ಆಸ್ಟ್ರೇಲಿಯಾ ಮೂರನೇ, ಇಂಗ್ಲೆಂಡ್ 105 ಅಂಕಗಳೊಂದಿಗೆ ನಾಲ್ಕನೇ ಮತ್ತು ದಕ್ಷಿಣ ಆಫ್ರಿಕಾ 98 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.
  
ನ್ಯೂಜಿಲೆಂಡ್ ಎರಡು ಟೆಸ್ಟ್ ಪಂದ್ಯ ಗೆಲ್ಲುವ ಮೂಲಕ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಟೇಬಲ್‌ನಲ್ಲಿ 120 ಗೆದ್ದಿದೆ. ಈ 120 ಅಂಕಗಳೊಂದಿಗೆ 180 ಅಂಕ ಸೇರಿಸಿದ್ದು ನ್ಯೂಜಿಲೆಂಡ್ ಐಸಿಸಿ ಚಾಂಪಿಯನ್‌ಶಿಪ್ ಟೇಬಲ್‌ನಲ್ಲಿ ಮೂರನೇ ಸ್ಥಾನವನ್ನು ತಲುಪಿದೆ. ಭಾರತ 360 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 296 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 146 ಅಂಕಗಳೊಂದಿಗೆ ಇಂಗ್ಲೆಂಡ್ ನಾಲ್ಕನೇ ಸ್ಥಾನದಲ್ಲಿದ್ದರೆ ಮತ್ತು 140 ಅಂಕಗಳೊಂದಿಗೆ ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ. 

Stay up to date on all the latest ಕ್ರಿಕೆಟ್ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp