ಐಸಿಸಿ ಟೆಸ್ಟ್ ರ್ಯಾಂಕಿಂಗ್: ಕಳಪೆ ಪ್ರದರ್ಶನದಿಂದ 42 ಅಂಕ ಕಳೆದುಕೊಂಡ ವಿರಾಟ್

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ನ್ಯೂಜಿಲೆಂಡ್ ವಿರುದ್ಧದ ಎರಡು ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದರಿಂದ, ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 900 ಅಂಕಗಳಿಗಿಂತಲೂ ಕೆಳಗೆ ಕುಸಿದಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ನ್ಯೂಜಿಲೆಂಡ್ ವಿರುದ್ಧದ ಎರಡು ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದರಿಂದ, ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 900 ಅಂಕಗಳಿಗಿಂತಲೂ ಕೆಳಗೆ ಕುಸಿದಿದ್ದಾರೆ.

ವಿರಾಟ್ ಈ ಸರಣಿಯನ್ನು ಪ್ರಾರಂಭಿಸಿದಾಗ 928 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದರು ಮತ್ತು ವಿಶ್ವದ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿದ್ದರು. ವಿರಾಟ್ ಕೊಹ್ಲಿ ಮತ್ತು ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ನಡುವೆ 17 ಅಂಕಗಳ ಅಂತರವಿತ್ತು. ಸ್ಮಿತ್ 911 ಅಂಕಗಳನ್ನು ಹೊಂದಿದ್ದರು. ಆದರೆ ಸರಣಿಯ ಕೊನೆಯಲ್ಲಿ, ವಿರಾಟ್ 886 ಅಂಕಗಳನ್ನು ಗಳಿಸಿದ್ದಾರೆ ಮತ್ತು ಈ ಸರಣಿಯಲ್ಲಿ ಒಟ್ಟು 42 ಅಂಕಗಳನ್ನು ಕಳೆದುಕೊಂಡಿದ್ದಾರೆ. ಆದರೆ, ಪ್ರಸ್ತುತ ಅವರು ಬ್ಯಾಟಿಂಗ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 

ಇನ್ನು ಬೌಲಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ಬಲಗೈ ವೇಗದ ಬೌಲರ್ ಬೌಲರ್ ಜಸ್ಪ್ರೀತ್ ಬುಮ್ರಾ ಮುಂಬಡ್ತಿಯನ್ನು ಪಡೆದಿದ್ದಾರೆ. ಕ್ರೈಸ್ಟ್‌ಚರ್ಚ್ ಪಂದ್ಯದಲ್ಲಿ ಲಯಕ್ಕೆ ಮರಳಿರುವ ಬುಮ್ರಾ, ಐಸಿಸಿ ತಾಜಾ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟಾಪ್ 10 ಪಟ್ಟಿಗೆ ಸೇರಿದ್ದಾರೆ. ನಾಲ್ಕು ಸ್ಥಾನಗಳ ಮುನ್ನಡೆ ಪಡೆದಿರುವ ಜಸ್ಪ್ರೀತ್ ಬುಮ್ರಾ 7ನೇ ಸ್ಥಾನವನ್ನು ಆಲಂಕರಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 0-2 ಅಂತರದ ಹೀನಾಯ ಸೋಲು ಅನುಭವಿಸಿದರೂ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ ಎರಡನೇ ಸ್ಥಾನಕ್ಕೆ ಭರ್ಜರಿ ಜಿಗಿತ ಕಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com