ಪ್ರತಿಭೆ ಗುರುತಿಸಲು ಮುಂದಿನ ವರ್ಷದಿಂದ ಮಹಿಳಾ ಐಪಿಎಲ್ ಆಯೋಜಿಸಿ: ಸುನಿಲ್ ಗವಾಸ್ಕರ್

ಪ್ರತಿಭಾವಂತ ಆಟಗಾರರನ್ನು ಗುರುತಿಸಲು ಮತ್ತು ಹೊಸ ಹೊಸ ಪ್ರತಿಭೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಮುಂದಿನ ವರ್ಷದ ಪುರುಷರ ಐಪಿಎಲ್ ಮಾದರಿಯಲ್ಲಿಯೇ ಪೂರ್ಣ ಪ್ರಮಾಣದ ಮಹಿಳೆಯರ ಐಪಿಎಲ್ ಲೀಗ್ ಆಯೋಜಿಸಬೇಕು ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಬಿಸಿಸಿಐಗೆ ಸಲಹೆ ನೀಡಿದ್ದಾರೆ.
ಸುನಿಲ್ ಗವಾಸ್ಕರ್ (ಸಂಗ್ರಹ ಚಿತ್ರ)
ಸುನಿಲ್ ಗವಾಸ್ಕರ್ (ಸಂಗ್ರಹ ಚಿತ್ರ)

ಮೆಲ್ಬೋರ್ನ್: ಪ್ರತಿಭಾವಂತ ಆಟಗಾರರನ್ನು ಗುರುತಿಸಲು ಮತ್ತು ಹೊಸ ಹೊಸ ಪ್ರತಿಭೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಮುಂದಿನ ವರ್ಷದ ಪುರುಷರ ಐಪಿಎಲ್ ಮಾದರಿಯಲ್ಲಿಯೇ ಪೂರ್ಣ ಪ್ರಮಾಣದ ಮಹಿಳೆಯರ ಐಪಿಎಲ್ ಲೀಗ್ ಆಯೋಜಿಸಬೇಕು ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಬಿಸಿಸಿಐಗೆ ಸಲಹೆ ನೀಡಿದ್ದಾರೆ.

ಮಹಿಳಾ ಟಿ-20 ವಿಶ್ವಕಪ್ ಫೈನಲ್ ನಲ್ಲಿ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಸೋಲು ಅನುಭವಿಸಿದ ಬಳಿಕ ಸುನಿಲ್ ಗವಾಸ್ಕರ್ ಈ ಹೇಳಿಕೆ ನೀಡಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ.

2021ರಿಂದ ಮಹಿಳಾ ಐಪಿಎಲ್ ಟೂರ್ನಿಯನ್ನೂ ಆಯೋಜಿಸಲು ಯೋಜನೆ ರೂಪಿಸುವಂತೆ ನಾನು ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿಗೆ ಮತ್ತು ಬಿಸಿಸಿಐಗೆ ಸಲಹೆ ನೀಡುತ್ತಿದ್ದೇನೆ. ಇದರಿಂದ ಹೆಚ್ಚಿನ ಪ್ರತಿಭಗಳನ್ನು ಗುರುತಿಸಲು ಸಹಾಯವಾಗುತ್ತದೆ ಎಂದು ಗವಾಸ್ಕರ್ ಹೇಳಿದ್ದಾರೆ.

ಭಾರತದ ಮಹಿಳಾ ಕ್ರಿಕೆಟ್‌ನಲ್ಲಿ ಈಗಾಗಲೇ ಅನೇಕ ಅಮೂಲ್ಯ ಆಟಗಾರ್ತಿಯರಿದ್ದಾರೆ. ಒಂದು ವೇಳೆ ಮಹಿಳೆಯರ ಐಪಿಎಲ್​ ನಡೆಸಿದ್ದೇ ಆದ್ರೆ, ತಂಡಕ್ಕೆ ಮತ್ತಷ್ಟು ಸಹಾಯವಾಗಲಿದೆ. ಹೊಸ ಪ್ರತಿಭೆಗಳು ಬೆಳಕಿಗೆ ಬರುವ ಮೂಲಕ ಭವಿಷ್ಯದಲ್ಲಿ ದೊಡ್ಡ ಟೂರ್ನಿಗಳನ್ನ ಗೆಲ್ಲೋದಕ್ಕೆ ಸಹಕಾರಿಯಾಗಲಿದೆ ಎಂದು ಗವಾಸ್ಕರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com