ಮಹಾಮಾರಿ ಕೊರೋನಾ ಭೀತಿ: ಬಿಸಿಸಿಐಗೂ ಬೀಗ

ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಬೀಗ ಹಾಕಲಾಗಿದೆ.
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ಮುಂಬೈ: ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಬೀಗ ಹಾಕಲಾಗಿದೆ. 

ನಾಳೆಯಿಂದ ಕಚೇರಿಗೆ ಬೀಗ ಹಾಕಲಾಗುತ್ತಿದ್ದು ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಇನ್ನು ಮುಂದಿನ ಆದೇಶದವರೆಗೂ ಸಿಬ್ಬಂದಿ ಮನೆಯಿಂದಲೇ ಕೆಲಸ ನಿರ್ವಹಿಸಬೇಕಿದೆ. 

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಬಿಸಿಸಿಐ ಐಪಿಎಲ್ 2020 ಟೂರ್ನಿಯನ್ನು ಮುಂದೂಡಿದೆ. ಇದರ ಜೊತೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಮತ್ತು ದೇಶೀಯ ಟೂರ್ನಿಗಳನ್ನು ರದ್ದು ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com