ಕ್ವಾರಂಟೈನ್‍ ಸೌಲಭ್ಯಕ್ಕಾಗಿ ಈಡನ್ ಗಾರ್ಡನ್ಸ್ ನೀಡಲು ಸಿದ್ಧ: ಸೌರವ್ ಗಂಗೂಲಿ

ಕೊರೊನಾವೈರಸ್ ಉಲ್ಬಣ ಹಿನ್ನೆಲೆಯಲ್ಲಿ ಕ್ಯಾರಂಟೈನ್(ಸಂಪರ್ಕತಡೆ) ಸೌಲಭ್ಯಗಳಿಗೆ ಬಳಸಿಕೊಳ್ಳಲು ಈಡನ್ ಗಾರ್ಡನ್ಸ್ ಒಳಾಂಗಣ ಕ್ರೀಡಾಂಗಣವನ್ನು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೀಡಲು ಸಿದ್ಧ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ನವದೆಹಲಿ: ಕೊರೊನಾವೈರಸ್ ಉಲ್ಬಣ ಹಿನ್ನೆಲೆಯಲ್ಲಿ ಕ್ಯಾರಂಟೈನ್(ಸಂಪರ್ಕತಡೆ) ಸೌಲಭ್ಯಗಳಿಗೆ ಬಳಸಿಕೊಳ್ಳಲು ಈಡನ್ ಗಾರ್ಡನ್ಸ್ ಒಳಾಂಗಣ ಕ್ರೀಡಾಂಗಣವನ್ನು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೀಡಲು ಸಿದ್ಧ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಸರ್ಕಾರ ಇಚ್ಛಿಸಿದರೆ ಖಂಡಿತವಾಗಿಯೂ ಕ್ರೀಡಾಂಗಣವನ್ನು ಹಸ್ತಾಂತರಿಸುತ್ತೇವೆ. ಇದೆಲ್ಲವೂ ತುರ್ತು ಅಗತ್ಯವಾಗಿದೆ ಎಂದು ಗಂಗೂಲಿ ಹೇಳಿದ್ದಾರೆ.

ಈ ಮಧ್ಯೆ, ಭಾರತದಲ್ಲಿ ಬುಧವಾರ ಬೆಳಿಗ್ಗೆ ವೇಳೆಗೆ ಕೋವಿದ್-19 ಸೋಂಕಿನ ದೃಢಪಟ್ಟ ಪ್ರಕರಣಗಳ ಸಂಖ್ಯೆ 562 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 10ಕ್ಕೆ ಮುಟ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಪಾಂಡಿಚೆರಿ ಕ್ರಿಕೆಟ್ ಸಂಸ್ಥೆ (ಸಿಎಪಿ) ಈ ಮೊದಲು ಪುದುಚೇರಿಯಲ್ಲಿನ ಕೊರೊನಾವೈರಸ್ ರೋಗಿಗಳಿಗೆ ಸಂಪರ್ಕತಡೆ ಸೌಲಭ್ಯಕ್ಕಾಗಿ ಅದರ ಟುಟಿಪೆಟ್ ಕ್ಯಾಂಪಸ್‌ನಲ್ಲಿನ ಕಟ್ಟಡವನ್ನು ನೀಡಿದೆ.

ವೈರಸ್ ಹರಡುವುದನ್ನು ತಡೆಗಟ್ಟಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ 21 ದಿನಗಳ ಲಾಕ್ ಡೌನ್ ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com