ಕೋವಿಡ್- 19: ಜಾಗೃತಿ ವಿಡಿಯೋ ಬಳಿಕ 50 ಲಕ್ಷ ರೂ. ನೆರವು ಘೋಷಿಸಿದ ತೆಂಡೊಲ್ಕರ್ 

ಜಾಗತಿಕವಾಗಿ ಭಯಭೀತಗೊಳಿಸಿರುವ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತ ಸರಕಾರಕ್ಕೆ ಹಲವು ಕ್ರೀಡಾಪಟುಗಳು ಈಗಾಗಲೇ ನೆರವಿನ ಹಸ್ತ ಚಾಚಿದ್ದಾರೆ. ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸಹ ಸರಕಾರಕ್ಕೆ 50 ಲಕ್ಷ ರೂ. ನೆರವು ಘೋಷಿಸಿದ್ದಾರೆ
ಸಚಿನ್ ತೆಂಡೊಲ್ಕರ್
ಸಚಿನ್ ತೆಂಡೊಲ್ಕರ್

ಮುಂಬೈ: ಜಾಗತಿಕವಾಗಿ ಭಯಭೀತಗೊಳಿಸಿರುವ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತ ಸರಕಾರಕ್ಕೆ ಹಲವು ಕ್ರೀಡಾಪಟುಗಳು ಈಗಾಗಲೇ ನೆರವಿನ ಹಸ್ತ ಚಾಚಿದ್ದಾರೆ. ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸಹ ಸರಕಾರಕ್ಕೆ 50 ಲಕ್ಷ ರೂ. ನೆರವು ಘೋಷಿಸಿದ್ದಾರೆ

ಇತ್ತೀಚೆಗಷ್ಟೇ ತಮ್ಮ ಟ್ವೀಟರ್ ಖಾತೆಯಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಕುರಿತಾದ ವಿಡಿಯೋ ಸಂದೇಶ ಹಂಚಿಕೊಂಡಿದ್ದ ಸಚಿನ್, ಇದೀಗ ಜಾಗತಿಕ ಪಿಡುಗಾಗಿರುವ ಕೊರೊನಾ ವಿರುದ್ಧ ಹೋರಾಟಕ್ಕೆ 50 ಲಕ್ಷ ರೂಪಾಯಿ ನೀಡಲು ನಿರ್ಧರಿಸಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ

''ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿಯಮಿತವಾಗಿ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುವ ಸಚಿನ್ ಪ್ರಧಾನ ಮಂತ್ರಿಗಳ ಪರಿಹಾರ ನಿಧಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ಕೊಡುಗೆ ನೀಡಲು ನಿರ್ಧರಿಸಿದ್ದಾರೆ

ಈ ಹಿಂದೆ ಅವರು, ಆಸ್ಟ್ರೇಲಿಯಾದಲ್ಲಿ ಬುಷ್‌ಫೈರ್‌ನಂತಹ ದೇಣಿಗೆಗಳ ಭಾಗವಾಗಿದ್ದರು ಮತ್ತು ಈ ಪ್ರಯತ್ನದ ಸಮಯದಲ್ಲಿ ಒಗ್ಗೂಡುವುದು ಮುಖ್ಯ ಎಂದು ನಂಬಿದ್ದಾರೆ ಎಂದು ಮೂಲಗಳು ತಿಳಿಸಿವೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com