‘ನನ್ನ ಮಗನಿಗೆ ಅಷ್ಟು ವಯಸ್ಸಾಗಿಲ್ಲ’: ಧೋನಿ ತಾಯಿ

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಫೋಟೋವೊಂದು ಇತ್ತೀಚಿಗೆ ಭಾರೀ ವೈರಲ್ ಆಗಿತ್ತು. ಅದರಲ್ಲಿ ಧೋನಿ ಬಿಳಿ ಗಡ್ಡದಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಅವರ ವಯಸ್ಸಿನ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ.
ಧೋನಿ
ಧೋನಿ

ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಫೋಟೋವೊಂದು ಇತ್ತೀಚಿಗೆ ಭಾರೀ ವೈರಲ್ ಆಗಿತ್ತು. ಅದರಲ್ಲಿ ಧೋನಿ ಬಿಳಿ ಗಡ್ಡದಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಅವರ ವಯಸ್ಸಿನ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಧೋನಿ ತಾಯಿ ದೇವಕಿ ದೇವಿ ಅವರು, ನಾನು ಧೋನಿ ಲುಕ್ ನೋಡಿದ್ದೇನೆ. ವಿಡಿಯೋದಲ್ಲಿ ಧೋನಿಗೆ ಅಷ್ಟು ವಯಸ್ಸಾಗಿದೆ ಎಂದು ಅನಿಸುವುದಿಲ್ಲ. ಯಾವುದೇ ತಾಯಿಗೂ ಕೂಡ ತನ್ನ ಮಗನಿಗೆ ವಯಸ್ಸಾಗಿಲ್ಲ ಎನ್ನಿಸಬಹುದೆನೋ? ಈ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಧೋನಿ ಆಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಸದ್ಯ ಕೊರೋನಾ ವೈರಸ್ ಅಂತ್ಯವಾಗಬೇಕಿದೆ. ನಿವೃತ್ತಿಯ ಕುರಿತು ಧೋನಿ ಒಳ್ಳೆಯ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಧೋನಿ ಇತ್ತೀಚೆಗೆ ಪುತ್ರಿಯೊಂದಿಗೆ ಸೇರಿ ಮನೆಯ ಗಾರ್ಡನ್ ಪ್ರದೇಶದಲ್ಲಿ ಆಟವಾಡುತ್ತಿದ್ದ ವಿಡಿಯೋವನ್ನು ಅವರ ಪತ್ನಿ ಸಾಕ್ಷಿ ಧೋನಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಕೂಡ ಆಗಿತ್ತು. 38 ವರ್ಷದ ಧೋನಿ ಹೊಸ ಲುಕ್‍ನಲ್ಲಿ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದರು. ಆದರೆ ವಿಡಿಯೋದಲ್ಲಿ ಧೋನಿ ಲುಕ್ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com