ನನಗಿಂತ ಮುಂಚೆ ಸೆಹ್ವಾಗ್‌ ದಾಖಲೆ ಮುರಿಯುವುದು ಯುವರಾಜ್ ಗುರಿಯಾಗಿತ್ತು, ಆದರೆ ಸಾಧ್ಯವಾಗಲಿಲ್ಲವೇಕೆ?: ರೋಹಿತ್ ಶರ್ಮಾ

ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ದ್ವಿಶತಕ ದಾಖಲಿಸಿದ ಮೊತ್ತ ಮೊದಲ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆ ಸಚಿನ್‌ ತೆಂಡೂಲ್ಕರ್‌ ಅವರದ್ದು, ಬಳಿಕ ಈ ದಾಖಲೆಯನ್ನು 2011ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧದ ಏಕದಿನ ಕ್ರಿಕೆಟ್ ನಲ್ಲಿ 219 ರನ್‌ಗಳಿಸುವ ಮೂಲಕ ವೀರೇಂದ್ರ ಸೆಹ್ವಾಗ್‌ ಈ ದಾಖಲೆಯನ್ನು ಮುರಿದರು.
ಯುವರಾಜ್ ಸಿಂಗ್-ರೋಹಿತ್ ಶರ್ಮಾ
ಯುವರಾಜ್ ಸಿಂಗ್-ರೋಹಿತ್ ಶರ್ಮಾ

ನವದೆಹಲಿ: ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ದ್ವಿಶತಕ ದಾಖಲಿಸಿದ ಮೊತ್ತ ಮೊದಲ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆ ಸಚಿನ್‌ ತೆಂಡೂಲ್ಕರ್‌ ಅವರದ್ದು, ಬಳಿಕ ಈ ದಾಖಲೆಯನ್ನು 2011ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧದ ಏಕದಿನ ಕ್ರಿಕೆಟ್ ನಲ್ಲಿ 219 ರನ್‌ಗಳಿಸುವ ಮೂಲಕ ವೀರೇಂದ್ರ ಸೆಹ್ವಾಗ್‌ ಈ ದಾಖಲೆಯನ್ನು ಮುರಿದರು. 

ಅಂದಹಾಗೆ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸುವುದು ಅತ್ಯಂತ ಕಷ್ಟದ ಕೆಲಸ ಎಂದೇ ಹೇಳಲಾಗುತ್ತದೆ. ಆದ್ದರಿಂದಲೇ ಇಂದು ವಿಶ್ವ ಕ್ರಿಕೆಟ್‌ನಲ್ಲಿ ಕೇವಲ ಬೆರಳೆಣಿಕೆಯ ಬ್ಯಾಟ್ಸ್‌ಮನ್‌ಗಳು ಮಾತ್ರವೇ ಈ ಸಾಧನೆ ಮಾಡಿದ್ದಾರೆ.

ಆದರೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅವರಿಗೆ ಸೆಹ್ವಾಗ್ ಅವರ ದಾಖಲೆ ಮುರಿಯುವ ಗುರಿ ಹೊಂದಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. 

ಯುವರಾಜ್ ಸಿಂಗ್ ಅವರು 304 ಏಕದಿನ ಪಂದ್ಯಗಳನ್ನು ಆಡಿದ್ದು 8701 ರನ್ ಗಳಿಸಿದ್ದಾರೆ. ಇನ್ನು ಏಕದಿನ ಕ್ರಿಕೆಟ್ ನಲ್ಲಿ 150 ರನ್ ಗಳಿಸಿದ್ದು ಅವರ ಗರಿಷ್ಠ ರನ್ ಆಗಿದೆ. 

ಇನ್ನು ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿ ಖ್ಯಾತಿಗೆ ರೋಹಿತ್ ಶರ್ಮಾ ಭಾಜನರಾಗಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 264 ರನ್ ಗಳಿಸುವ ಮೂಲಕ ಕ್ರಿಕೆಟ್ ಇತಿಹಾಸದಲ್ಲೇ ಮೈಲಿಗಲ್ಲು ಸೃಷ್ಟಿಸಿದ್ದರು. ಅದೇ ಅಲ್ಲದೆ ಮೂರು ಬಾರಿ ಡಬಲ್ ಸೆಂಚೂರಿ ಹೊಡೆದ ಅಗ್ರ ಬ್ಯಾಟ್ಸ್ ಮನ್ ಆಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com