ಖೇಲ್ ರತ್ನ ಪ್ರಶಸ್ತಿಗೆ  ಹಿಟ್ ಮ್ಯಾನ್ ರೋಹಿತ್ ಶರ್ಮಾ ಹೆಸರು ಶಿಫಾರಸು!

ಟೀಂ ಇಂಡಿಯಾದ ಏಕದಿನ ತಂಡದ ಉಪ ನಾಯಕ, ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ 2020ಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಪ್ರಕಟಿಸಿದೆ.

Published: 30th May 2020 09:56 PM  |   Last Updated: 30th May 2020 10:01 PM   |  A+A-


Rohit Sharma

ರೋಹಿತ್ ಶರ್ಮಾ

Posted By : vishwanath
Source : UNI

ಮುಂಬೈ: ಟೀಂ ಇಂಡಿಯಾದ ಏಕದಿನ ತಂಡದ ಉಪ ನಾಯಕ, ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ 2020ಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಪ್ರಕಟಿಸಿದೆ.

ಅಲ್ಲದೆ, ಇಶಾಂತ್ ಶರ್ಮಾ, ಶಿಖರ್ ಧವನ್ ಮತ್ತು ಮಹಿಳಾ ಕ್ರಿಕೆಟರ್ ದೀಪ್ತಿ ಶರ್ಮಾ ಅವರನ್ನು  ಅರ್ಜುನ ಪ್ರಶಸ್ತಿಗೆ ನಾಮಕರಣಗೊಳಿಸಲಾಗಿದೆ.

ಕೇಂದ್ರ ಸರ್ಕಾರದ ಯುವಜನ  ವ್ಯವಹಾರಗಳು, ಕ್ರೀಡಾ ಸಚಿವಾಲಯ 2016ರ ಜನವರಿ 1 ರಿಂದ 2019ರ ಡಿಸೆಂಬರ್ 31ರವರೆಗೆ ಈ ಪ್ರಶಸ್ತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆ ಸಂಬಂಧ ಕ್ರೀಡಾ ಸಚಿವಾಲಯ ನಿಗಧಿಪಡಿಸಿದ ಅವಧಿಯಲ್ಲಿ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ನಾಲ್ಕು ಶತಕ,  8 ಏಕದಿನ ಪಂದ್ಯಗಳಲ್ಲಿ 150 ಕ್ಕಿಂತ ಹೆಚ್ಚು ರನ್ ಗಳಿಸುವ ಮೂಲಕ  ಪ್ರಶಸ್ತಿಗೆ ಆರ್ಹತೆ ಪಡೆದುಕೊಂಡಿದ್ದಾರೆ.

Stay up to date on all the latest ಕ್ರಿಕೆಟ್ news
Poll
farmers-Protest

ದೆಹಲಿಯಲ್ಲಿ ಟ್ರಾಕ್ಟರ್ ಪೆರೇಡ್ ಸಮಯದಲ್ಲಿನ ಹಿಂಸಾಚಾರವು ರೈತರ ಆಂದೋಲನದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp