ಟೆಸ್ಟ್‌ ಗೆ ಮರಳಲು ಎದುರು ನೋಡುತ್ತಿದ್ದೇನೆ: ವೇಗಿ ಭುವನೇಶ್ವರ್‌ ಕುಮಾರ್

ದೀರ್ಘಕಾಲದ ಬಳಿಕ ಟೆಸ್ಟ್ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದೇನೆ ಎಂದು ಭಾರತ ತಂಡದ ವೇಗಿ ಭುವನೇಶ್ವರ್ ಕುಮಾರ್ ಹೇಳಿದ್ದಾರೆ.
ಭುವನೇಶ್ವರ್ ಕುಮಾರ್
ಭುವನೇಶ್ವರ್ ಕುಮಾರ್

ನವದೆಹಲಿ: ದೀರ್ಘಕಾಲದ ಬಳಿಕ ಟೆಸ್ಟ್ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದೇನೆ ಎಂದು ಭಾರತ ತಂಡದ ವೇಗಿ ಭುವನೇಶ್ವರ್ ಕುಮಾರ್ ಹೇಳಿದ್ದಾರೆ.

ಟೀಮ್‌ ಇಂಡಿಯಾದ ಸ್ವಿಂಗ್‌ ಕಿಂಗ್‌ ಎಂದೇ ಖ್ಯಾತಿ ಪಡೆದುಕೊಂಡಿರುವ ಬಲಗೈ ವೇಗದ ಬೌಲರ್‌ ಭುವನೇಶ್ವರ್‌ ಕುಮಾರ್‌, ಭಾರತ ತಂಡದ ಪರ ಟೆಸ್ಟ್‌ ಕ್ರಿಕೆಟ್‌ ಆಡಿ ಹಲವು ಸಮಯೇ ಕಳೆದಿದೆ. ಮೀರತ್‌ ಮೂಲದ ಬಲಗೈ ವೇಗಿ 2018ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಜೊಹಾನ್ಸ್‌  ಬರ್ಗ್‌ನಲ್ಲಿ ತಮ್ಮ ಕೊನೆಯ ಟೆಸ್ಟ್‌ ಆಡಿದ್ದರು.

ಸತತ ಗಾಯದ ಸಮಸ್ಯೆಗಳ ಬಳಿಕ ಕಮ್‌ಬ್ಯಾಕ್‌ ಮಾಡಿರುವ ಭವನೇಶ್ವರ್‌ ಕುಮಾರ್‌ ಇದೀಗ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಆದರೆ, ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವಕಾಶ ಬಹಳ ಕಡಿಮೆ ಇದೆ. ಏಕೆಂದರೆ ವೇಗದ ಬೌಲಿಂಗ್‌ ವಿಭಾಗದಲ್ಲಿ ಇಶಾಂತ್‌  ಶರ್ಮಾ, ಮೊಹಮ್ಮದ್‌ ಶಮಿ, ಜಸ್‌ಪ್ರೀತ್‌ ಬುಮ್ರಾ ಮತ್ತು ಉಮೇಶ್‌ ಯಾದವ್‌ ತಂಡದ ಮೊದಲ ಆಯ್ಕೆಯಾಗಿದ್ದಾರೆ. 

ಈ ಕುರಿತಂತೆ ಟೈಮ್ಸ್‌ ಆಫ್‌ ಇಂಡಿಯಾಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಭುವನೇಶ್ವರ್ ಕುಮಾರ್, "ಟೆಸ್ಟ್‌ ಕ್ರಿಕೆಟ್‌ನಲ್ಲಿ ಮರಳಿ ಆಡುವುದನ್ನು ಎದುರು ನೋಡುತ್ತಿದ್ದೇನೆ. ಅದರೆ ಕಮ್‌ಬ್ಯಾಕ್‌ ಮಾಡುವುದು ಅಷ್ಟು ಸುಲಭವಲ್ಲ ಎಂಬುದು ಗೊತ್ತಿದೆ. ಏಕೆಂದರೆ ತಂಡದಲ್ಲಿ ಇರುವ  ಪ್ರತಿಯೊಬ್ಬ ಆಟಗಾರನೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ, ಎಂದು ಹೇಳಿಕೊಂಡಿದ್ದಾರೆ.

"ನನ್ನ ಸಾಮರ್ಥ್ಯ ಮೀರಿ ಟೆಸ್ಟ್‌ನಲ್ಲಿ ಮರಳಿ ಆಡುವ ಪ್ರಯತ್ನ ಮಾಡಲಿದ್ದೇನೆ. ಕ್ರಿಕೆಟ್‌ನ ಅತ್ಯಂತ ಕಠಿಣ ಮಾದರಿ ಅದು. ಟೆಸ್ಟ್‌ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸಿಗುವ ಸಂತೃಪ್ತಿಯೇ ಬೇರೆ," ಎಂದು ಭುವಿ ಹೇಳಿದ್ದಾರೆ.

ಇನ್ನು ಭುವನೇಶ್ವರ್ ಕುಮಾರ್ ಟೀಮ್‌ ಇಂಡಿಯಾ ಪರ 21 ಟೆಸ್ಟ್‌ ಪಂದ್ಯಗಳನ್ನು ಆಡಿ 63 ವಿಕೆಟ್‌ಗಳನ್ನು ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com