ರಾಜಸ್ಥಾನ ರಾಯಲ್ಸ್ ತಂಡವನ್ನು 60 ರನ್ ಗಳಿಂದ ಸೋಲಿಸಿದ ಕೆಕೆಆರ್, ಫ್ಲೇ ಆಫ್ ಕನಸು ಜೀವಂತ
ಮಹತ್ವದ ಪಂದ್ಯದಲ್ಲಿ ನಿರಾಸೆ ಅನುಭವಿಸಿದ ರಾಜಸ್ಥಾನ ರಾಯಲ್ಸ್ ಎಡವಿದ್ದು, ಫ್ಲೇ ಆಫ್ ರೇಸ್ ನಿಂದ ಹೊರಗೆ ಬಿದ್ದಿದೆ.
ಇನ್ನೂ ಈ ಪಂದ್ಯವನ್ನು 60 ರನ್ ಗಳ ಅಂತರದಲ್ಲಿ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಫ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
Published: 02nd November 2020 12:41 AM | Last Updated: 02nd November 2020 09:55 AM | A+A A-

ಕೆಕೆಆರ್ ತಂಡ
ದುಬೈ: ಮಹತ್ವದ ಪಂದ್ಯದಲ್ಲಿ ನಿರಾಸೆ ಅನುಭವಿಸಿದ ರಾಜಸ್ಥಾನ ರಾಯಲ್ಸ್ ಎಡವಿದ್ದು, ಫ್ಲೇ ಆಫ್ ರೇಸ್ ನಿಂದ ಹೊರಗೆ ಬಿದ್ದಿದೆ.
ಇನ್ನೂ ಈ ಪಂದ್ಯವನ್ನು 60 ರನ್ ಗಳ ಅಂತರದಲ್ಲಿ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಫ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 191 ರನ್ ಕಲೆ ಹಾಕಿತು. ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 131 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಎಂಟನೇ ಸ್ಥಾನದಲ್ಲಿದ್ದ ಕೆಕೆಆರ್ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆಯಿತು.
ಕೆಕೆಆರ್ ಪರ ಉತ್ತಮ ದಾಳಿ ನಡೆಸಿದ ಪ್ಯಾಟ್ ಕಮಿನ್ಸ್ 34 ರನ್ ನೀಡಿ ಪ್ರಮುಖ 4 ವಿಕೆಟ್ ಗಳನ್ನು ಕಬಳಿಸಿದರು. ಶಿವಂ ಮಾವಿ ಹಾಗೂ ವರುಣ್ ಚಕ್ರವರ್ತಿ ಎರಡೆರಡು ವಿಕೆಟ್ ಪಡೆದರು.ಕಮಲೇಶ್ ನಾಗರಕೋಟೆ ಒಂದು ವಿಕೆಟ್ ಗಳಿಸಿದರು. ಇದರೊಂದಿಗೆ ರಾಜಸ್ಥಾನ ರಾಯಲ್ಸ್ ಪಾಯಿಂಟ್ಸ್ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿಯಿತು.
ಮಂಗಳವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಸೋಲು ಕಂಡರೆ, ಕೆಕೆಆರ್ ಫ್ಲೇ ಆಫ್ ಹಂತ ತಲುಪಲು ಅವಕಾಶವಿದೆ.