ಐಪಿಎಲ್ 2020: ಡೆಲ್ಲಿ ವಿರುದ್ಧ ಸೋತ ಆರ್ ಸಿಬಿ ಪ್ಲೇ ಆಫ್ ಗೆ ಕ್ವಾಲಿಫೈ

ಇಲ್ಲಿನ ಶೇಕ್ ಝಾಯಿದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್  ಆರು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಅರ್ಹತೆ ಪಡೆದುಕೊಂಡಿದೆ. ಪಂದ್ಯ ಸೋತರೂ ಆರ್ ಸಿಬಿ ಪ್ಲೇ ಆಫ್ ಗೆ ಎಂಟ್ರಿಯಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರನ್ನು ಅಭಿನಂದಿಸುತ್ತಿರುವ ಕೊಹ್ಲಿ
ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರನ್ನು ಅಭಿನಂದಿಸುತ್ತಿರುವ ಕೊಹ್ಲಿ

ಅಬುದಾಬಿ: ಇಲ್ಲಿನ ಶೇಕ್ ಝಾಯಿದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್  ಆರು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಅರ್ಹತೆ ಪಡೆದುಕೊಂಡಿದೆ. ಪಂದ್ಯ ಸೋತರೂ ಆರ್ ಸಿಬಿ ಪ್ಲೇ ಆಫ್ ಗೆ ಎಂಟ್ರಿಯಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್  ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಗೆ ನಿರ್ಧರಿಸಿದ್ದರಿಂದ ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು. ಕನ್ನಡಿಗ ದೇವದತ್ ಪಡಿಕ್ಕಲ್ ಆಕರ್ಷಕ ಅರ್ಧಶತಕ ಸಿಡಿಸಿದರೆ, ಎಬಿ ಡಿವಿಲಿಯರ್ಸ್ 35, ನಾಯಕ ವಿರಾಟ್ ಕೊಹ್ಲಿ 29 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಅನ್ರಿಕ್ ನಾರ್ಟ್ಜೆ ಮೂರು, ಕಗಿಸೋ ರಬಾಡ 2, ಆರ್. ಅಶ್ವಿನ್ 1 ವಿಕೆಟ್ ಪಡೆದರು.

ನಂತರ ಆರ್ ಸಿಬಿ ನೀಡಿದ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್   ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ 4 ವಿಕೆಟ್  ನಷ್ಟಕ್ಕೆ
154 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು. ಅಜಿಂಕ್ಯ ರಹಾನೆ 60, ಶಿಖರ್ ಧವನ್ 54, ಮಾರ್ಕೆಸ್  ಸ್ಟೊಯಿನಿಸ್ 10 ರನ್ ಗಳಿಸಿದರು. ಆರ್ ಸಿಬಿ ಪರ ಶಹಬಾಜ್ ಅಹ್ಮದ್ 2, ವಾಷಿಂಗ್ಟನ್ ಸುಂದರ್ 1, ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಮೂರು ವಿಕೆಟ್ ಪಡೆದು ಗೆಲುವಿಗೆ ಪ್ರಮುಖ ನೆರವು ನೀಡಿದ ಅನ್ರಿಕ್ ನಾರ್ಟ್ಜೆ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com