ಬಿಸಿಸಿಐ ಬಾಸ್ ಸೌರವ್‌ ಗಂಗೂಲಿ ಸಲಹೆ ಮೀರಿ ಮೈದಾನಕ್ಕಿಳಿದ ಮುಂಬೈ ನಾಯಕ ರೋಹಿತ್ ಶರ್ಮಾ!

ಪ್ರಸಕ್ತ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಕಿಂಗ್ಸ್ ಇಲೆವೆನ್‌ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್‌ ಶರ್ಮಾ ಮಂಗಳವಾರ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ಅಚ್ಚರಿ ಉಂಟು ಮಾಡಿದ್ದರು.
ರೋಹಿತ್ ಶರ್ಮಾ-ಗಂಗೂಲಿ
ರೋಹಿತ್ ಶರ್ಮಾ-ಗಂಗೂಲಿ

ನವದೆಹಲಿ: ಪ್ರಸಕ್ತ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಕಿಂಗ್ಸ್ ಇಲೆವೆನ್‌ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್‌ ಶರ್ಮಾ ಮಂಗಳವಾರ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ಅಚ್ಚರಿ ಉಂಟು ಮಾಡಿದ್ದರು.

ಗಾಯದಿಂದ ಹಾಗೂ ಫಿಟ್ನೆಸ್‌ ಸಮಸ್ಯೆಯಿಂದ ರೋಹಿತ್‌ ಶರ್ಮಾ ಅವರನ್ನು ಕಳೆದ ವಾರ ಬಿಸಿಸಿಐ ಪ್ರಕಟಿಸಿದ್ದ ಆಸ್ಟ್ರೇಲಿಯಾ ಪ್ರವಾಸದ ಬಾರತ ತಂಡದಿಂದ ಕೈ ಬಿಡಲಾಗಿತ್ತು. ಈ ಬಗ್ಗೆ ಮಂಗಳವಾರ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, ರೋಹಿತ್‌ ಶರ್ಮಾ ತಂಡದ ಬೆನ್ನೆಲುಬು ಹಾಗಾಗಿ, ಅವರು ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಗಾಯದಿಂದ ಚೇತರಿಸಿಕೊಳ್ಳಬೇಕು. ಹಾಗಾಗಿ ಅವರು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಬೇಕು ಎಂದು ಸಲಹೆ ನೀಡಿದ್ದರು.

ಆದರೆ, ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಟಾಸ್‌ಗೆ ಬರುವ ಮೂಲಕ ರೋಹಿತ್‌ ಶರ್ಮಾ ತಾನು ಸಂಪೂರ್ಣ ಫಿಟ್‌ ಆಗಿದ್ದೇನೆ ಎಂದು ಹೇಳುವ ಮೂಲಕ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಮಾತನ್ನು ದಿಕ್ಕರಿಸಿದರು. ಆ ಮೂಲಕ ಹಲವರ ಕೆಂಗಣ್ಣಿಗೆ ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್‌ ಶರ್ಮಾ ಗುರಿಯಾದರು.

ಮುಂಬೈ ಇಂಡಿಯನ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹೈದರಾಬಾದ್ ತಂಡ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com