ಆಸ್ಟ್ರೇಲಿಯಾ ಪ್ರವಾಸ: ನವೆಂಬರ್ 13ರಿಂದ ಸಿಡ್ನಿಯಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ತರಬೇತಿ ಆರಂಭ

ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಅವಧಿಯಲ್ಲಿ ಸಡಿಲತೆ ಇಲ್ಲದಿದ್ದರೂ ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ತರಬೇತಿ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ದುಬೈ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಅವಧಿಯಲ್ಲಿ ಸಡಿಲತೆ ಇಲ್ಲದಿದ್ದರೂ ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ತರಬೇತಿ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

 ಆಸ್ಟ್ರೇಲಿಯಾಕ್ಕೆ ತೆರಳಿದ ನಂತರ ಒಂದು ಸುತ್ತಿನ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಆಟಗಾರರ ತರಬೇತಿಗೆ ಅವಕಾಶ ಮಾಡಿಕೊಳ್ಳಲಾಗುವುದು ಎಂಬಂತಹ ಸುದ್ದಿ ಬಂದಿದೆ.

ನವೆಂಬರ್ 12 ರಂದು ಟೀಂ ಇಂಡಿಯಾ ಆಸ್ಟ್ರೇಲಿಯಾಕ್ಕೆ  ತೆರಳಲಿದ್ದು, ಕೊರೋನಾ ಪರೀಕ್ಷೆ ನಡೆಸಲಾಗುತ್ತದೆ. ನಂತರ ನೆಗೆಟಿವ್ ವರದಿ ಬಂದರೆ ತರಬೇತಿ ಆರಂಭಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಯುಎಇ ಐಪಿಎಲ್ ನಲ್ಲಿ ಸಂಪೂರ್ಣ ವ್ಯತಿರಿಕ್ತ ಪರಿಸ್ಥಿತಿಯಲ್ಲಿ 60 ದಿನಗಳ ಕಾಲ ಟೀಂ ಇಂಡಿಯಾ ಆಟಗಾರರು ಆಡಿದ್ದು, 
ಕೊರೊನಾವೈರಸ್ ನಂತರದ ಯುಗದಲ್ಲಿ ಜೈವಿಕ ಸುರಕ್ಷತಾ ಕ್ರಮಗಳು ಜಾರಿಯಲ್ಲಿರುವುದರಿಂದ, ತಂಡವು ಇಂಟ್ರಾಸ್ಕ್ವಾಡ್ ಪಂದ್ಯಗಳನ್ನು ಆಡುವ ನಿರೀಕ್ಷೆಯಿದೆ, ಏಕೆಂದರೆ ಭಾರತೀಯ ಆಟಗಾರರು ಆಸ್ಟ್ರೇಲಿಯಾದ ವಿಕೆಟ್ ಮತ್ತು ಷರತ್ತುಗಳಿಗೆ ಬೇಗನೆ ಹೊಂದಿಕೊಳ್ಳುತ್ತಾರೆ.

ಐಪಿಎಲ್ ಎಲಿಮಿನೇಟರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತ ನಂತರ ನಾಯಕ ವಿರಾಟ್ ಕೊಹ್ಲಿ ಶುಕ್ರವಾರ ತಡರಾತ್ರಿ ದುಬೈನಲ್ಲಿ ಭಾರತೀಯ ಆಟಗಾರರಿಗಾಗಿ ರಚಿಸಿರುವ ಜೈವಿಕ ಸುರಕ್ಷ ಪ್ರದೇಶಕ್ಕೆ  ತೆರಳಿದರು. ಮಾಯಾಂಕ್ ಆಗರ್ ವಾಲ್ ಟೆಸ್ಟ್ ತಜ್ಞ ಚೇತೇಶ್ವರ್ ಪೂಜಾರಾ ಮತ್ತು ಹನುಮ ವಿಹಾರಿ ಯೊಂದಿಗೆ ಟೆಸ್ಟ್ ಸಿದ್ಧತೆಯನ್ನು ಈಗಾಗಲೇ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com