ನಾಯಕತ್ವದಿಂದ ಕೊಹ್ಲಿಯನ್ನು ಕಿತ್ತು ಹಾಕಿ: ವಿರಾಟ್ ನಾಯಕತ್ವ ಸಮರ್ಥಿಸಿಕೊಂಡ ಆರ್ ಸಿಬಿ ಕೋಚ್

ಐಪಿಎಲ್ 2020ರ ಎಲಿಮಿನೇಟರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಕೊಹ್ಲಿ
ಕೊಹ್ಲಿ

ನವದೆಹಲಿ: ಐಪಿಎಲ್ 2020ರ ಎಲಿಮಿನೇಟರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ವಿರಾಟ್ ಸತತ ಎಂಟು ವರ್ಷಗಳ ಕಾಲ ತಮ್ಮ ನಾಯಕತ್ವದಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲದಿರುವ ಬಗ್ಗೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಮುಖ್ಯ ಕೋಚ್ ಸೈಮನ್ ಕಟಿಚ್ ಅವರು ನಾಯಕ ವಿರಾಟ್ ಕೊಹ್ಲಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಒಂದು ಐಪಿಎಲ್ ಟೂರ್ನಿಯನ್ನು ಗೆಲ್ಲಿಸದ ಕೊಹ್ಲಿಯನ್ನು ಆರ್ ಸಿಬಿ ನಾಯಕತ್ವದಿಂದ ತೆಗೆಯಬೇಕು ಎಂದು ಗೌತಮ್ ಗಂಭೀರ್ ಆರಂಭಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸೈಮನ್ ಗೌತಮ್ ಗಂಭೀರ್ ಮತ್ತು ಕೊಹ್ಲಿ ನಡುವೆ ಮುಂದಿನಿಂದಲೂ ಭಿನ್ನಾಭಿಪ್ರಾಯಗಳು ಇವೆ. ಹೀಗಾಗಿ ಕೊಹ್ಲಿ ನಾಯಕತ್ವವನ್ನು ಗಂಭೀರ್ ಪ್ರಶ್ನಿಸುತ್ತಿದ್ದಾರೆ ಎಂದರು. 

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ಮೊದಲು ಬ್ಯಾಟಿಂಗ್ ಮಾಡಿ 7 ವಿಕೆಟ್ ನಷ್ಟಕ್ಕೆ 131 ರನ್ ಪೇರಿಸಿತ್ತು. ಸಾಧಾರಣ ಮೊತ್ತ ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ 4 ವಿಕೆಟ್ ನಷ್ಟಕ್ಕೆ 132 ರನ್ ಬಾರಿಸಿ ಗೆಲುವಿನ ನಗೆ ಬೀರಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com