ವಿರಾಟ್ ಕೊಹ್ಲಿ ನಾಯಕತ್ವದ ಮೇಲೆ ಕುತ್ತು, ರೋಹಿತ್ ಗೆ ಪಟ್ಟದ ಕೂಗು

ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕತ್ವದ ಎಂಟು ವರ್ಷಗಳಲ್ಲಿ ವಿರಾಟ್ ಕೊಹ್ಲಿ ಒಮ್ಮೆಯೂ ಐಪಿಎಲ್ ಟ್ರೋಫಿ ಎತ್ತಿಲ್ಲ. ಆದರೆ ರೋಹಿತ್ ಶರ್ಮಾ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ನಾಯಕತ್ವದ ಬಗ್ಗೆ ಚರ್ಚೆ ಆರಂಭವಾಗಿವೆ.
ರೋಹಿತ್-ಕೊಹ್ಲಿ
ರೋಹಿತ್-ಕೊಹ್ಲಿ

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕತ್ವದ ಎಂಟು ವರ್ಷಗಳಲ್ಲಿ ವಿರಾಟ್ ಕೊಹ್ಲಿ ಒಮ್ಮೆಯೂ ಐಪಿಎಲ್ ಟ್ರೋಫಿ ಎತ್ತಿಲ್ಲ. ಆದರೆ ರೋಹಿತ್ ಶರ್ಮಾ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ನಾಯಕತ್ವದ ಬಗ್ಗೆ ಚರ್ಚೆ ಆರಂಭವಾಗಿವೆ.

ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ವಿರಾಟ್ ಭಾರತ ನಾಯಕನಾಗಿದ್ದಾರೆ. ರೋಹಿತ್ ಸೀಮಿತ ಓವರ್‌ಗಳ ಉಪನಾಯಕ. ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಏಕದಿನ ಮತ್ತು ಟಿ 20 ಸರಣಿಯಲ್ಲಿ ಆಡುವುದಿಲ್ಲವಾದರೂ, ಅವರು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಭಾರತ ತಂಡದ ಭಾಗವಾಗಲಿದ್ದಾರೆ. ಬೆಂಗಳೂರು ತಂಡ ಈ ಬಾರಿ ಐಪಿಎಲ್ ಪ್ಲೇ ಆಫ್ ತಲುಪಿತು ಆದರೆ ಎಲಿಮಿನೇಟರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತಿತು.

ಸೀಮಿತ ಓವರ್‌ಗಳ ಅಥವಾ ಟಿ20 ಭಾರತ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ಅವರಿಗೆ ನೀಡದೇ ಇದ್ದಲ್ಲಿ ಅದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ನೊಂದಿಲ್ಲ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌ ಹೇಳಿದ್ದಾರೆ.

ಇದೇ ವೇಳೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಸಹ ರೋಹಿತ್ ಶರ್ಮಾರನ್ನು ಹೊಗಳಿದ್ದಾರೆ. ಭಾರತ ಟಿ20 ತಂಡವನ್ನು ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಮುನ್ನಡೆಸಬೇಕು ಎಂದು ಹೇಳಿದ್ದಾರೆ. 

ಐಪಿಎಲ್ 13ನೇ ಆವೃತ್ತಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಮಟ್ಟವನ್ನು ಮುಡಿಗೇರಿಸಿಕೊಂಡಿತು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಒಟ್ಟು 5 ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ಸಾಧನೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com