ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ: ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧ- ರೋಹಿತ್ ಶರ್ಮಾ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧವಿರುವುದಾಗಿ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ.
Published: 22nd November 2020 08:43 PM | Last Updated: 23rd November 2020 12:33 PM | A+A A-

ರೋಹಿತ್ ಶರ್ಮಾ
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧವಿರುವುದಾಗಿ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ.
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ ನೆಟ್ ಪುನಶ್ಚೇತನ ಶಿಬಿರದಲ್ಲಿರುವ ರೋಹಿತ್ ಶರ್ಮಾ, ಯಾವ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂಬುದು ನನ್ನ ಮನದಲಿಲ್ಲ. ಯಾವುದೇ ಕ್ರಮಾಂಕದಲ್ಲೂ ಬ್ಯಾಟಿಂಗ್ ಮಾಡಲು ಸಿದ್ಧನಿದ್ದೇನೆ ಎಂದು ಸುದ್ದಿಸಂಸ್ಥೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.
ಟೀಮ್ ಮ್ಯಾನೇಜ್ ಮೆಂಟ್ ಯಾವ ರೀತಿಯಲ್ಲಿ ಬದಲಾವಣೆ ಮಾಡಲಿದೆ ಎಂಬುದು ಗೊತ್ತಿಲ್ಲ. ಆಸ್ಟ್ರೇಲಿಯಾಕ್ಕೆ ತೆರಳಿದ ನಂತರ ಎಲ್ಲವೂ ಗೊತ್ತಾಗಲಿದೆ. ಅವರು ಯಾವ ಕ್ರಮಾಂಕದಲ್ಲಿ ಆಡು ಅಂತಾರೋ ಆ ಕ್ರಮಾಂಕದಲ್ಲಿ ಆಡುವುದಾಗಿ ಅವರು ಹೇಳಿದ್ದಾರೆ. ಡಿಸೆಂಬರ್ 17ರಿಂದ ಅಡಿಲೇಡ್ ನಲ್ಲಿ ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್ ಆರಂಭವಾಗಲಿದೆ.