
ಗ್ರೆಗ್ ಬಾರ್ಕ್ಲೇ
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಅಧ್ಯಕ್ಷರಾಗಿ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೇ ಅವರು ಆಯ್ಕೆಗೊಂಡಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಹಂಗಾಮಿ ಅಧ್ಯಕ್ಷ ಇಮ್ರಾನ್ ಖವಾಜಾ ವಿರುದ್ದ 11-5 ಮತಗಳ ಬಹುಮತದಿಂದ ಸ್ವತಂತ್ರ ಅಧ್ಯಕ್ಷರಾಗಿ ಆಯ್ಕೆಗೊಂಡು, ಅಧಿಕಾರ ವಹಿಸಿಕೊಂಡಿದ್ದಾರೆ. ಭಾರತದ ಶಶಾಂಕ್ ಮನೋಹರ್ ಅವರ ನಂತರ ಬಾರ್ಕ್ಲೇ ಸ್ವತಂತ್ರವಾಗಿ ಆಯ್ಕೆಯಾದ ಎರಡನೇ ಅಧ್ಯಕ್ಷರಾಗಿದ್ದಾರೆ.
ಗ್ರೆಗ್ ಬಾರ್ಕ್ಲೇ 2012 ರಿಂದ ನ್ಯೂಜಿಲೆಂಡ್ ಕ್ರಿಕೆಟ್ ನಿರ್ದೇಶಕರಾಗಿದ್ದು, ವಕೀಲರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 2015 ರ ವಿಶ್ವಕಪ್‌ನ ನಿರ್ದೇಶಕರಾಗಿ, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾದ ಕೆಲವು ಮಂಡಳಿಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಏತನ್ಮಧ್ಯೆ, ಐಸಿಸಿ ಅಧ್ಯಕ್ಷರಾಗಿ ಬಾರ್ಕ್ಲೇಸ್ ಅಧಿಕಾರ ವಹಿಸಿಕೊಂಡ ನಂತರ ಖವಾಜಾ ಹಂಗಾಮಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ. ಜುಲೈನಲ್ಲಿ ಮನೋಹರ್ ಶಶಾಂಕ್ ಅವರ ಅಧಿಕಾರಾವಧಿ ಮುಗಿದ ನಂತರ ಖವಾಜಾ ತಾತ್ಕಾಲಿಕ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು.
ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಾರ್ಕ್ಲೇ, 'ಐಸಿಸಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ನನಗೆ ಸಿಕ್ಕ ದೊಡ್ಡ ಗೌರವವಾಗಿದೆ. ನನ್ನನ್ನು ಬೆಂಬಲಿಸಿದ ನನ್ನ ಸಹವರ್ತಿ ಐಸಿಸಿ ನಿರ್ದೇಶಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕ್ರಿಕೆಟ್ ನ ಅಭಿವೃದ್ಧಿಗಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಕೋವಿಡ್ -19 ನಂತಹ ಸಾಂಕ್ರಾಮಿಕ ರೋಗದಿಂದ ಹೊರಬಂದು ಉತ್ತಮ ಸ್ಥಾನದಲ್ಲಿ ಮುಂದೆ ಸಾಗಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.
ಈ ಹಿಂದೆ ಐಸಿಸಿಯಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ನ ಪ್ರತಿನಿಧಿಯಾಗಿದ್ದ ಬಾರ್ಕ್ಲೇ ಇದೀಗ ಅವರ ಸ್ಥಾನಕ್ಕೆ ರಾಜಿನಾಮೆ ನೀಡಿ ಐಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲಿದ್ದಾರೆ.
Greg Barclay has been elected as the new Independent Chair of the International Cricket Council.
— ICC (@ICC) November 24, 2020
Barclay joins from New Zealand Cricket where he has been a director since 2012 and also served as a director of the 2015 ICC @cricketworldcup.
Read more